ದೇಶ

ಮಾನಹಾನಿ ಪ್ರಕರಣದಲ್ಲಿ ಜೈಲು ಶಿಕ್ಷೆ: ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ 'ಸುಪ್ರೀಂ' ಮೆಟ್ಟಿಲೇರಿದ ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶಿಕ್ಷೆಗೆ ತಡೆ ಕೋರಿ ಶನಿವಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಮಾನಹಾನಿ ಪ್ರಕರಣದಲ್ಲಿ ಜೈಲು ಶಿಕ್ಷೆ: ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ 'ಸುಪ್ರೀಂ' ಮೆಟ್ಟಿಲೇರಿದ ರಾಹುಲ್ ಗಾಂಧಿ
ರಾಹುಲ್ ಗಾಂಧಿ
Published On :

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶಿಕ್ಷೆಗೆ ತಡೆ ಕೋರಿ ಶನಿವಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ರಾಹುಲ್ ಗಾಂಧಿ ಶಿಕ್ಷೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ಕಳೆದ ಶುಕ್ರವಾರ ನಿರಾಕರಿಸಿತ್ತು. ಇಂದು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಕಳೆದ ಮಾರ್ಚ್‌ನಲ್ಲಿ ಸೂರತ್‌ ಮ್ಯಾಜಿಸ್ಟ್ರೇಟ್‌ ಕೋರ್ಟ್, ಮಾನಹಾನಿ ಪ್ರಕರಣದಲ್ಲಿ ರಾಹುಲ್‌ ಗಾಂಧಿ ದೋಷಿ ಎಂದು ತೀರ್ಪು ನೀಡಿ, ಐಪಿಸಿ 499,500 ರಡಿ ಎರಡು ವರ್ಷ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಶಿಕ್ಷೆ ಪ್ರಕಟಗೊಂಡ ಮರುದಿನವೇ, ಲೋಕಸಭೆಯ ಸ್ಪೀಕರ್ ಕಾರ್ಯಾಲಯ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿತ್ತು.

2019ರ ಲೋಕಸಭೆ ಚುನಾವಣೆ ವೇಳೆ ರಾಹುಲ್ ಗಾಂಧಿ ಅವರು, ಮೋದಿ ಎಂಬ ಹೆಸರು ಹೊಂದಿರುವವರೆಲ್ಲರೂ ಕಳ್ಳರು ಎಂಬ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಈ ಹೆಸರು ಹೊಂದಿರುವವರನ್ನು ಉಲ್ಲೇಖಿಸಿದ್ದ ಅವರು, ಎಲ್ಲ ಮೋದಿಗಳೂ ಕಳ್ಳರು. ಮೋದಿ ಉಪನಾಮ ಹೊಂದಿರುವವರು ಕಳ್ಳರಾಗಲು ಹೇಗೆ ಸಾಧ್ಯ ಎಂದು ವ್ಯಂಗ್ಯವಾಡಿದ್ದರು.

ರಾಹುಲ್​ ಹೇಳಿಕೆಯಿಂದ ಆಕ್ರೋಶಗೊಂಡ ಬಿಜೆಪಿ ಶಾಸಕ ಪೂರ್ಣೇಶ್​ ಮೋದಿ, ದೂರು ದಾಖಲು ಮಾಡಿದ್ದರು. 2019ರ ಏಪ್ರಿಲ್​​​ ತಿಂಗಳಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್​​ 499 ಮತ್ತು 500ರ ಅಡಿ ಮಾನಹಾನಿ ಪ್ರಕರಣ ದಾಖಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.