ಮದ್ರಾಸ್ ಹೈಕೋರ್ಟ್ ಭಿನ್ನ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರು ಮದ್ರಾಸ್ ಹೈಕೋರ್ಟ್ನ ಭಿನ್ನ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರು ಮದ್ರಾಸ್ ಹೈಕೋರ್ಟ್ನ ಭಿನ್ನ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಸೆಂಥಿಲ್ ಬಾಲಾಜಿ ಅವರ ಬಂಧನಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ್ಯಾಯಮೂರ್ತಿಗಳಾದ ನಿಶಾ ಬಾನು ಮತ್ತು ಡಿ ಭರತ ಚಕ್ರವರ್ತಿ ಅವರು ವಿಭಿನ್ನ ತೀರ್ಪು ನೀಡಿದ್ದರು. ನ್ಯಾಯಮೂರ್ತಿ ನಿಶಾ ಬಾನು ಅವರು ಬಾಲಾಜಿ ಬಿಡುಗಡೆಗಾಗಿ ಸಲ್ಲಿಸಲಾದ ಹೇಬಿಯಸ್ ಕಾರ್ಪಸ್ ಮನವಿ ಸಮರ್ಥನೀಯವಾಗಿದೆ, ಅವರನ್ನು ಬಿಡುಗಡೆ ಮಾಡಬಹುದು ಎಂದು ಹೇಳಿದ್ದರು. ಆದರೆ ನ್ಯಾಯಮೂರ್ತಿ ಡಿ ಭರತ ಚಕ್ರವರ್ತಿ ಅವರು ನ್ಯಾಯಮೂರ್ತಿ ಬಾನು ಅವರ ಅಭಿಪ್ರಾಯವನ್ನು ಒಪ್ಪಲು ಸಾಧ್ಯವಿಲ್ಲ, ಎದೆನೋವಿಗೆ ಚಿಕಿತ್ಸೆ ಪಡೆಯುತ್ತಿರುವ ಬಾಲಾಜಿ ಆಸ್ಪತ್ರೆಯಲ್ಲಿರುವಷ್ಟು ದಿನ ಇಡಿ ಕಸ್ಟಡಿಯಿಂದ ಹೊರಗಿರಲಿದ್ದಾರೆ. ಅಷ್ಟರೊಳಗೆ ಬಾಲಾಜಿ ಫಿಟ್ ಆಗಿದ್ದರೆ ಹತ್ತು ದಿನಗಳಲ್ಲಿ ಮತ್ತೆ ಇಡಿ ಕಸ್ಟಡಿಗೆ ತೆರಳಬಹುದು ಎಂದು ಹೇಳಿದ್ದರು.
ಸೆಂಥಿಲ್ ಬಾಲಾಜಿ ಹಾಗೂ ಅವರ ಪತ್ನಿ ಮೇಗಾಲಾ ಕೂಡ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಉದ್ಯೋಗಕ್ಕಾಗಿ ಹಣ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ) ಅಡಿಯಲ್ಲಿ ಜಾರಿ ನಿರ್ದೇಶನಾಲಯ ಜೂನ್ 14 ರಂದು ತಮಿಳುನಾಡು ಸಚಿವರನ್ನು ಬಂಧಿಸಿತ್ತು. ಆದಾಗ್ಯೂ, ಇಡಿ ದಾಳಿಯ ಸಮಯದಲ್ಲಿ ಅವರು ಅಸ್ವಸ್ಥಗೊಂಡಿದ್ದರಿಂದ ಚೆನ್ನೈನ ಒಮಂದೂರಾರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


