ಮಣಿಪುರ: ಇಬ್ಬರು ಮಹಿಳೆಯರ ಆಕ್ಷೇಪಾರ್ಹ ವಿಡಿಯೋ ಹಂಚಿಕೊಳ್ಳದಂತೆ ಸಾಮಾಜಿಕ ಮಾಧ್ಯಮಗಳಿಗೆ ಸರ್ಕಾರ ಸೂಚನೆ
ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಕ್ಯಾಮರಾ ಮುಂದೆ ನಗ್ನಗೊಳಿಸಿ, ಪರೇಡ್ ಮಾಡಿಸಿದ ಬಳಿಕ ಗ್ಯಾಂಗ್ ರೇಪ್ ಮಾಡಿರುವ ಘಟನೆ ನಡೆದಿದೆ. ಗುರುವಾರ ಟ್ವಿಟರ್ ಮತ್ತು ಇತರ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಆದೇಶ ಹೊರಡಿಸಿರುವ ಸರ್ಕಾರ, ಈ ಆಕ್ಷೇಪಾರ್ಹ ವಿಡಿಯೋವನ್ನು ಹಂಚಿಕೊಳ್ಳದಂತೆ ಸೂಚನೆ ನೀಡಿದೆ ಎಂದು ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ.

ನವದೆಹಲಿ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಕ್ಯಾಮರಾ ಮುಂದೆ ನಗ್ನಗೊಳಿಸಿ, ಪರೇಡ್ ಮಾಡಿಸಿದ ಬಳಿಕ ಗ್ಯಾಂಗ್ ರೇಪ್ ಮಾಡಿರುವ ಘಟನೆ ನಡೆದಿದೆ. ಗುರುವಾರ ಟ್ವಿಟರ್ ಮತ್ತು ಇತರ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಆದೇಶ ಹೊರಡಿಸಿರುವ ಸರ್ಕಾರ, ಈ ಆಕ್ಷೇಪಾರ್ಹ ವಿಡಿಯೋವನ್ನು ಹಂಚಿಕೊಳ್ಳದಂತೆ ಸೂಚನೆ ನೀಡಿದೆ ಎಂದು ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಸದ್ಯ ತನಿಖೆ ಪ್ರಗತಿಯಲ್ಲಿರುವುದರಿಂದ ಸಾಮಾಜಿಕ ಮಾಧ್ಯಮ ವೇದಿಕೆಗಳು ಭಾರತೀಯ ಕಾನೂನುಗಳಿಗೆ ಬದ್ಧವಾಗಿರುವುದು ಕಡ್ಡಾಯವಾಗಿದೆ ಎಂದು ಮೂಲಗಳು ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿವೆ.
ಗಲಭೆ ಪೀಡಿತ ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೇ 4ರಂದು ಘಟನೆ ನಡೆದಿದ್ದು,ತಡವಾಗಿ ಬೆಳಕಿಗೆ ಬಂದಿದೆ. ಜನರ ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆ ಮಾಡಿ, ಮೆರವಣಿಗೆ ಮಾಡಿದ ವಿಡಿಯೋ ಬುಧವಾರ ವೈರಲ್ ಆಗಿದ್ದು, ಸಂಘರ್ಷ ಪೀಡಿತ ರಾಜ್ಯದಲ್ಲಿ ಅನೇಕರು ಆಘಾತಕ್ಕೊಳಗಾಗಿದ್ದಾರೆ ಮತ್ತು ಘಟನೆಯನ್ನು ಖಂಡಿಸಿದ್ದಾರೆ.
ಇಬ್ಬರು ಮಹಿಳೆಯರನ್ನು ಭತ್ತದ ಗದ್ದೆಗೆ ಕರೆದೊಯ್ಯುವಾಗ ಪುರುಷರನ್ನು ಒಳಗೊಂಡ ಗುಂಪು ನಿರಂತರವಾಗಿ ಇಬ್ಬರಿಗೆ ಕಿರುಕುಳ ನೀಡುವುದನ್ನು ವಿಡಿಯೋದಲ್ಲಿ ಕಾಣಬಹುದು. ಸಂತ್ರಸ್ತರು ಸಹಾಯಕ್ಕಾಗಿ ಅಳುತ್ತಿದ್ದರೂ, ನೆರೆದಿದ್ದವರ ಮಾನವೀಯತೆ ಮಣ್ಣು ಪಾಲಾಗಿತ್ತು.
ಈ ಘಟನೆಯನ್ನು ಮಣಿಪುರದ ಪೊಲೀಸರು ದೃಢೀಕರಿಸಿದ್ದು, ಬುಧವಾರ ಸಂಜೆ ನೀಡಿದ ಹೇಳಿಕೆಯಲ್ಲಿ, ಅಪರಾಧಿಗಳನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


