ದೇಶ

ಮಣಿಪುರ: ಮಹಿಳೆಯರಿಬ್ಬರ ಬೆತ್ತಲೆಗೊಳಿಸಿ ಮೆರವಣಿಗೆ, ಪ್ರಮುಖ ಆರೋಪಿ ಬಂಧನ

ಮಣಿಪುರದಲ್ಲಿ ಮಹಿಳೆಯರಿಬ್ಬರ ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿರುವ ಪ್ರಕರಣ ಸಂಬಂಧ ಪ್ರಮುಖ ಆರೋಪಿಯನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ಗುರುವಾರ ಹೇಳಿದ್ದಾರೆ.

ಮಣಿಪುರ: ಮಹಿಳೆಯರಿಬ್ಬರ ಬೆತ್ತಲೆಗೊಳಿಸಿ ಮೆರವಣಿಗೆ, ಪ್ರಮುಖ ಆರೋಪಿ ಬಂಧನ
ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್
Published On :

ಇಂಫಾಲ: ಮಣಿಪುರದಲ್ಲಿ ಮಹಿಳೆಯರಿಬ್ಬರ ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿರುವ ಪ್ರಕರಣ ಸಂಬಂಧ ಪ್ರಮುಖ ಆರೋಪಿಯನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ಗುರುವಾರ ಹೇಳಿದ್ದಾರೆ.

ಹಿಂಸಾಚಾರ ಪೀಡಿತ ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿರೇನ್ ಸಿಂಗ್ ಅವರು, ವಿಡಿಯೋವನ್ನು ನೋಡಿ ಬಹಳ ನೋವಾಗಿದೆ. ಮಾನವೀಯತೆ ಮೇಲೆ ನಡೆದ ಅಪರಾಧವಿದು. ದುಷ್ಕರ್ಮಿಗಳ ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿತ್ತು. ಕಳೆದ ರಾತ್ರಿ 1.30ರ ಸುಮಾರಿಗೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಆರೋಪಿಗಳಿಗೆ ಮರಣದಂಡನೆ ವಿಧಿಸಲು ರಾಜ್ಯ ಸರ್ಕಾರ ಪ್ರಯತ್ನ ನಡೆಸಲಿದೆ. ಪ್ರತಿಯೊಬ್ಬರೂ ಇಂತಹ ಘಟನೆಯನ್ನು ಖಂಡಿಸಬೇಕು ಎಂದು ತಿಳಿಸಿದ್ದಾರೆ.

ಈ ನಡುವೆ ಮಹಿಳೆಯರ ಬೆತ್ತಲೆಗೊಳಿಸಿದ ಪ್ರಕರಣವನ್ನು ಪ್ರಧಾನಿ ಮೋದಿ ಖಂಡಿಸಿದ್ದು, ಇದು ಇಡೀ ಸಮಾಜ ತಲೆತಗ್ಗಿಸುವ ವಿಚಾರವಾಗಿದೆ ಎಂದು ಹೇಳಿದ್ದಾರೆ.

ಈ ಘಟನೆಯಿಂದ ಮಹಿಳೆಯರ ಘನತೆ, ಗೌರವಕ್ಕೆ ಧಕ್ಕೆಯಾಗಿದ್ದು, ಈ ಘಟನೆ ತುಂಬಾ ನೋವುಂಟು ಮಾಡಿದೆ. ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವವರ ವಿರುದ್ಧ ಕಠಿಣ ಕ್ರಮವಾಗಲಿದೆ, ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ. ಈ ಕೃತ್ಯವೆಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.