ಕಲ್ಲಿದ್ದಲು ಹಗರಣ: ಛತ್ತೀಸ್‌ಗಢ ಮಹಿಳಾ ಐಎಎಸ್ ಅಧಿಕಾರಿಯನ್ನು ಬಂಧಿಸಿದ ಇಡಿ
ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಛತ್ತೀಸ್ ಗಢದಲ್ಲಿ ಕೆಲವು ಐಎಎಸ್ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ, ಶನಿವಾರ ಐಎಎಸ್ ಅಧಿಕಾರಿ ರಾನು...

ರಾಯ್‌ಪುರ: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಛತ್ತೀಸ್ ಗಢದಲ್ಲಿ ಕೆಲವು ಐಎಎಸ್ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ, ಶನಿವಾರ ಐಎಎಸ್ ಅಧಿಕಾರಿ ರಾನು ಸಾಹು ಅವರನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಲ್ಲಿದ್ದಲು ಲೆವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಹು ಅವರನ್ನು ಬಂಧಿಸಲಾಗಿದ್ದು, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯದಲ್ಲಿ ಆರೋಪಿಯನ್ನು ಹಾಜರುಪಡಿಸಲಾಗಿದೆ ಎಂದು ಇಡಿ ವಕೀಲ ಸೌರಭ್ ಪಾಂಡೆ ತಿಳಿಸಿದ್ದಾರೆ.
ರಾನು ಸಾಹು ಅವರು ಈ ಪ್ರಕರಣದಲ್ಲಿ ಬಂಧಿತರಾದ ರಾಜ್ಯದ ಎರಡನೇ ಐಎಎಸ್ ಅಧಿಕಾರಿಯಾಗಿದ್ದಾರೆ.
2010 ರ ಬ್ಯಾಚ್‌ನ ಛತ್ತೀಸ್‌ಗಢ-ಕೇಡರ್ ಐಎಎಸ್ ಅಧಿಕಾರಿ ಸಾಹು ಅವರು ಪ್ರಸ್ತುತ ರಾಜ್ಯ ಕೃಷಿ ಇಲಾಖೆಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಮೊದಲು, ಅವರು ಕಲ್ಲಿದ್ದಲು-ಸಮೃದ್ಧ ಕೊರ್ಬಾ ಮತ್ತು ರಾಯಗಢ ಜಿಲ್ಲೆಗಳ ಕಲೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು.
ನಿನ್ನೆ ರಾಯಪುರದಲ್ಲಿರುವ ಸಾಹು ಅವರ ನಿವಾಸದ ಮೇಲೆ ಇಡಿ ದಾಳಿ ನಡೆಸಿತ್ತು. ಕಲ್ಲಿದ್ದಲು ಲೆವಿ ಪ್ರಕರಣದ ತನಿಖೆಯ ಭಾಗವಾಗಿ ಸಾಹು ಅವರ ಮನೆಯ ಮೇಲೆ ಈ ಹಿಂದೆಯೂ ದಾಳಿ ನಡೆಸಲಾಗಿತ್ತು ಮತ್ತು ಅವರ ಆಸ್ತಿಗಳನ್ನು ಇಡಿ ಜಪ್ತಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


