ದೇಶ

ಬಿಹಾರ: ಕೊಳವೆ ಬಾವಿಗೆ ಬಿದ್ದಿದ್ದ ಮೂರು ವರ್ಷದ ಬಾಲಕನ ರಕ್ಷಣೆ, ಆಸ್ಪತ್ರೆಗೆ ರವಾನೆ!

ಬಿಹಾರದ ನಳಂದ ಜಿಲ್ಲೆಯ ಕುಲ್ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಮೂರು ವರ್ಷದ ಮಗುವನ್ನು ರಕ್ಷಿಸಲಾಗಿದೆ. ಸತತ 5 ಗಂಟೆಗಳ ಕಾಲ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ನೇತೃತ್ವದಲ್ಲಿ ನಡೆದ ಯಶಸ್ವಿ ಕಾರ್ಯಾಚರಣೆ ಮೂಲಕ ಬಾಲಕನನ್ನು ರಕ್ಷಿಸಲಾಗಿದೆ.

ಬಿಹಾರ: ಕೊಳವೆ ಬಾವಿಗೆ ಬಿದ್ದಿದ್ದ ಮೂರು ವರ್ಷದ ಬಾಲಕನ ರಕ್ಷಣೆ, ಆಸ್ಪತ್ರೆಗೆ ರವಾನೆ!
ಬಾಲಕನ ಯಶಸ್ವಿ ಕಾರ್ಯಾಚರಣೆ
Published On :

ಪಟ್ನಾ: ಬಿಹಾರದ ನಳಂದ ಜಿಲ್ಲೆಯ ಕುಲ್ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಮೂರು ವರ್ಷದ ಮಗುವನ್ನು ರಕ್ಷಿಸಲಾಗಿದೆ. ಸತತ 5 ಗಂಟೆಗಳ ಕಾಲ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ನೇತೃತ್ವದಲ್ಲಿ ನಡೆದ ಯಶಸ್ವಿ ಕಾರ್ಯಾಚರಣೆ  ಮೂಲಕ ಬಾಲಕನನ್ನು ರಕ್ಷಿಸಲಾಗಿದೆ.

ಬಾಲಕ ಆರೋಗ್ಯವಾಗಿದ್ದು, ಕೊಳವೆ ಬಾವಿಯಿಂದ ಸುರಕ್ಷಿತ ಮೇಲಕ್ಕೆತ್ತಿದ ನಂತರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ನಳಂದ ಎನ್ ಡಿಆರ್ ಎಫ್ ಅಧಿಕಾರಿ ರಂಜೀತ್ ಕುಮಾರ್ ತಿಳಿಸಿದ್ದಾರೆ.

ರೈತರೊಬ್ಬರಿಗೆ ಸೇರಿದ ಕೊಳವೆ ಬಾವಿ ಮುಚ್ಚದ ಕಾರಣ ಶಿವಂ ಕುಮಾರ್ ಎಂಬ ಮಗು ಅದರೊಳಗೆ ಬಿದ್ದಿತ್ತು. ಆದರೊಂದಿಗೆ ಜೊತೆಗೆ ಆಟವಾಡುತ್ತಿದ್ದ ಮಕ್ಕಳು  ಮಗುವಿನ ಪೋಷಕರಿಗೆ ಮಾಹಿತಿ ನೀಡಿದ್ದರು. ನಂತರ ಘಟನಾ ಸ್ಥಳಕ್ಕೆ ಆಗಮಿಸಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯಿತು.

 ಮಗುವಿಗೆ ಆಮ್ಲಜನಕ ಪೂರೈಸುವ ಮೂಲಕ ಸುರಕ್ಷಿತವಾಗಿ ಮೇಲಕ್ಕೆಲಾಗಿದೆ. ತಕ್ಷಣವೇ ಅಲ್ಲಿಯೇ ಇದ್ದ ಆಂಬ್ಯುಲೆನ್ಸ್ ಮೂಲಕ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.