ಮಣಿಪುರದಲ್ಲಿ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ ಸಿಬಿಐಗೆ ವಹಿಸಿದ ಕೇಂದ್ರ
ಮಣಿಪುರದಲ್ಲಿ ಗುಂಪೊಂದು ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ನಡೆಸಿ, ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲಿದೆ ಮತ್ತು ರಾಜ್ಯದ ಹೊರಗೆ ಪ್ರಕರಣದ ವಿಚಾರಣೆ ನಡೆಸಲು ಸರ್ಕಾರ ಕೋರಲಿದೆ...

ನವದೆಹಲಿ: ಮಣಿಪುರದಲ್ಲಿ ಗುಂಪೊಂದು ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ನಡೆಸಿ, ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲಿದೆ ಮತ್ತು ರಾಜ್ಯದ ಹೊರಗೆ ಪ್ರಕರಣದ ವಿಚಾರಣೆ ನಡೆಸಲು ಸರ್ಕಾರ ಕೋರಲಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ನೆರೆಯ ಅಸ್ಸಾಂನ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.
ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಮತ್ತು ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆಗೆ ಕಾರಣವಾಗಿದ್ದ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ಸಿಬಿಐಗೆ ವಹಿಸಿದೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಗೃಹ ಸಚಿವಾಲಯವು ಮೈಟಿ ಮತ್ತು ಕುಕಿ ಎರಡೂ ಗುಂಪುಗಳೊಂದಿಗೆ ಸಂಪರ್ಕದಲ್ಲಿದೆ ಮತ್ತು ಮಣಿಪುರದಲ್ಲಿ ಸಹಜ ಸ್ಥಿತಿ ಪುನಃಸ್ಥಾಪಿಸಲು ಮಾತುಕತೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


