ದೇಶ

ರೀಲ್ಸ್ ವಿಡಿಯೋ ಮಾಡಿ ಅದನ್ನು ಪೋಸ್ಟ್ ಮಾಡಿದ್ದಕ್ಕೆ ಕೋಪಗೊಂಡು ಸಹೋದರಿಯನ್ನೇ ಕೊಂದ ಸಹೋದರ!

ತೆಲಂಗಾಣದ ಭದ್ರಾದ್ರಿ ಕೊಥಗುಡೆಂ ಜಿಲ್ಲೆಯ ಯುವಕನೊಬ್ಬ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಕ್ಕೆ ಕೋಪಗೊಂಡು ತನ್ನ ಸಹೋದರಿಯನ್ನು ಕೊಂದಿದ್ದಾನೆ.

ರೀಲ್ಸ್ ವಿಡಿಯೋ ಮಾಡಿ ಅದನ್ನು ಪೋಸ್ಟ್ ಮಾಡಿದ್ದಕ್ಕೆ ಕೋಪಗೊಂಡು ಸಹೋದರಿಯನ್ನೇ ಕೊಂದ ಸಹೋದರ!
ಮೃತ ಸಿಂಧು
Published On :

ಹೈದರಾಬಾದ್: ತೆಲಂಗಾಣದ ಭದ್ರಾದ್ರಿ ಕೊಥಗುಡೆಂ ಜಿಲ್ಲೆಯ ಯುವಕನೊಬ್ಬ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಕ್ಕೆ ಕೋಪಗೊಂಡು ತನ್ನ ಸಹೋದರಿಯನ್ನು ಕೊಂದಿದ್ದಾನೆ.

22ರ ಹರೆಯದ ಯುವಕ ಹರಿಲಾಲ್ ತನ್ನ ತಂಗಿ ಸಿಂಧು ಸಂಘವಿಗೆ ರೀಲ್ಸ್ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ನಿಷೇಧಿಸಿದ್ದರೂ ಆಕೆ ಕೇಳಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಜುಲೈ 24ರಂದು ಜಿಲ್ಲೆಯ ಯೆಲ್ಲಾಂಡು ಮಂಡಲದಲ್ಲಿ ಈ ಘಟನೆ ನಡೆದಿದೆ. 21ರ ಹರೆಯದ ಯುವತಿ ಸಿಂಧು ಸಂಘವಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಕೊಲೆ ಪ್ರಕರಣ ದಾಖಲಿಸಿಕೊಂಡು ಸಿಂಧುಳಾ ಸಹೋದರ ಹರಿಲಾಲ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹರಿಲಾಲ್ ಇದೆಲ್ಲ ನನಗೆ ಇಷ್ಟವಿಲ್ಲ ಎಂದು ಹೇಳುವ ಮೂಲಕ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡದಂತೆ ಎರಡು-ಮೂರು ಬಾರಿ ಸಿಂಧುಗೆ ಎಚ್ಚರಿಕೆ ನೀಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಜುಲೈ 24ರಂದು ಈ ವಿಷಯಕ್ಕೆ ಸಂಬಂಧಿಸಿದಂತೆ ಸಹೋದರ ಮತ್ತು ಸಹೋದರಿಯ ನಡುವೆ ತೀವ್ರ ವಾಗ್ವಾದ ನಡೆದಿತ್ತು.

ಈ ವೇಳೆ ಸಿಂಧು ನನ್ನಿಷ್ಟ ನಾನು ಮಾಡುತ್ತೇನೆ. ನೀನು ಏನು ಬೇಕಾದರು ಮಾಡಿಕೋ ಎಂದು ಹೇಳಿದ್ದಾಳೆ. ಇದರಿಂದ ಕೋಪಗೊಂಡ ಹರಿಲಾಲ್ ಆಕೆಯ ಮೇಲೆ ಹಲ್ಲೆ ನಡೆಸಿದ್ದು ತೀವ್ರವಾಗಿ ಅಸ್ವಸ್ಥಗೊಂಡಿದ್ದ ಸಿಂಧುಳನ್ನು ಕುಟುಂಬ ಸದಸ್ಯರು ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.