ದೇಶ

ಕೇರಳದಲ್ಲಿ ಪೈಶಾಚಿಕ ಕೃತ್ಯ: 5 ವರ್ಷದ ಮಗು ಮೇಲೆ ಅತ್ಯಾಚಾರ, ಹತ್ಯೆ; ಆರೋಪಿಯನ್ನು ಗಲ್ಲಿಗೇರಿಸಲು ಆಗ್ರಹ

5 ವರ್ಷದ ಮಗುವನ್ನು ಅಪಹರಿಸಿ, ಅತ್ಯಾಚಾರವೆಸಗಿ ಹತ್ಯೆಗೈದಿರುವ ಪೈಶಾಚಿಕ ಕೃತ್ಯ ವರದಿಯಾಗಿದ್ದು, ಮಗುವಿನ ಅಂತಿಮಯಾತ್ರೆಯನ್ನು ಭಾನುವಾರ ನಡೆಯಿತು. ಅಂತ್ಯಸಂಸ್ಕಾರದಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರು.

ಕೇರಳದಲ್ಲಿ ಪೈಶಾಚಿಕ ಕೃತ್ಯ: 5 ವರ್ಷದ ಮಗು ಮೇಲೆ ಅತ್ಯಾಚಾರ, ಹತ್ಯೆ; ಆರೋಪಿಯನ್ನು ಗಲ್ಲಿಗೇರಿಸಲು ಆಗ್ರಹ
ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಜನ
Published On :

ಕೊಚ್ಚಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಆಕೆಯ ಕುತ್ತಿಗೆ ಬಿಗಿದು ಹತ್ಯೆ ಮಾಡಿರುವ ಪ್ರಕರಣ ವರದಿಯಾಗಿದೆ. 5 ವರ್ಷದ ಮಗುವನ್ನು ಅಪಹರಿಸಿ, ಅತ್ಯಾಚಾರವೆಸಗಿ ಹತ್ಯೆಗೈದಿರುವ ಪೈಶಾಚಿಕ ಕೃತ್ಯ ವರದಿಯಾಗಿದ್ದು, ಮಗುವಿನ ಅಂತಿಮಯಾತ್ರೆಯನ್ನು ಭಾನುವಾರ ನಡೆಯಿತು. ಅಂತ್ಯಸಂಸ್ಕಾರದಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು, ಆರೋಪಿಗೆ  ಮರಣದಂಡನೆ ವಿಧಿಸಲು ಆಗ್ರಹಿಸಿದ್ದಾರೆ.

ಎರ್ನಾಕುಲಂ ಜಿಲ್ಲೆಯ ಅಲುವಾದಲ್ಲಿ ಬಿಹಾರ ಮೂಲದ ವಲಸಿಗ ದಂಪತಿಯೊಬ್ಬರ 5 ವರ್ಷದ ಮಗು ಶುಕ್ರವಾರ ಮಧ್ಯಾಹ್ನ ನಾಪತ್ತೆಯಾಗಿತ್ತು. ಪ್ರಕರಣ ದಾಖಲಿಸಿ ಮಗುವಿಗಾಗಿ ಹುಡುಕಾಟ ನಡೆಸಲಾಗಿದೆ. ಆದರೆ, 20 ಗಂಟೆಗಳವರೆಗೆ ಮಗುವಿನ ಪತ್ತೆಯಾಗಿರಲಿಲ್ಲ.

ಬಳಿಕ ದಂಪತಿ ವಾಸವಿದ್ದ ಕಟ್ಟಡದಲ್ಲೇ, ವಾಸವಿದ್ದ ಬಿಹಾರ ಮೂಲದ ವಲಸಿಗನೊಬ್ಬನನ್ನು ಮಗುವಿನ ಅಪಹರಣದ ಶಂಕೆಯ ಮೇಲೆ ಪೊಲೀಸರು ಬಂಧಿಸಿದ್ದು, ಆತ ತಪ್ಪೊಪ್ಪಿಕೊಂಡ ಬಳಿಕ ಶನಿವಾರ ಮಧ್ಯಾಹ್ನದ ವೇಳೆಗೆ ಅಲುವಾ ಮಾರ್ಕೆಟ್‌ ಬಳಿ ಮಗುವಿನ ದೇಹ ರಕ್ತಸಿಕ್ತ ಸ್ಥಿತಿಯಲ್ಲಿ, ಪ್ಲಾಸ್ಟಿಕ್‌ ಕವರ್‌ ಒಂದರಲ್ಲಿ ಸುತ್ತಿಟ್ಟಿರುವುದು ಪತ್ತೆಯಾಗಿದೆ. ಮಗುವಿನ ಮೇಲೆ ಅತ್ಯಾಚಾರವೆಸಗಿ, ಹತ್ಯೆಗೈದಿರುವುದು ತಿಳಿದುಬಂದಿದೆ.

ಆರೋಪಿ ಅಸ್ಫಾಕ್ ಆಲಂ (28) ಎಂಬಾತನನ್ನು ಶುಕ್ರವಾರ ರಾತ್ರಿಯೇ ಪೊಲೀಸರು ಬಂಧಿಸಿದ್ದರು, ಆದರೆ ಶನಿವಾರವಷ್ಟೇ ಆತ ತಪ್ಪೊಪ್ಪಿಕೊಂಡಿದ್ದು, ಆಲುವಾದ ಮಾರುಕಟ್ಟೆ ಬಳಿಯ ನಿರ್ಜನ ಪ್ರದೇಶದ ಕಸದ ರಾಶಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ.

ಆರೋಪಿಯು ಮಗುವಿಗೆ ಸಿಹಿ ಕೊಡಿಸುವುದಾಗಿ ಆಸೆ ತೋರಿಸಿ ಮಾರ್ಕೆಟ್‌ಗೆ ಕರೆದೊಯ್ದಿದ್ದಾನೆ. ಮಾರ್ಗಮಧ್ಯೆ ನೆರೆಮನೆಯವರು ವಿಚಾರಿಸಿದಾಗ ಇದು ತನ್ನದೇ ಮಗು, ಮಾರ್ಕೆಟ್‌ ತೋರಿಸುವುದಕ್ಕಾಗಿ ಕರೆದೊಯ್ಯುತ್ತಿರುವುದಾಗಿ ಹೇಳಿದ್ದಾನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಲ್ಲದೇ, ಕೃತ್ಯದಲ್ಲಿ ಬೇರೋಬ್ಬರು ಭಾಗಿಯಾಗಿರುವ ಶಂಕೆ ಇದ್ದು, ಆ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಮೇಲೆ ಅಮಾನುಷ ರೀತಿಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವುದು ಪೋಸ್ಟ್‌ಮಾರ್ಟಂ ವರದಿಯು ದೃಢಪಟ್ಟಿದ್ದು,  ಆರೋಪಿಗಳ ವಿರುದ್ಧ ಕೊಲೆ ಪ್ರಕರಣದ ಜೊತೆಗೆ ಪೋಕ್ಸೋ ಕಾಯ್ದೆಯ ಸಂಬಂಧಿತ ಸೆಕ್ಷನ್‌ ದಾಖಲಿಸಲಾಗಿದೆ. ಈ ಕುರಿತು ಕೇರಳದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಆರೋಪಿ, ಬಿಹಾರದ ವಲಸೆ ಕಾರ್ಮಿಕನಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಸಂತ್ರಸ್ತ ಮಗುವಿನ ತಾಯಿ, ಪೋಷಕರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.