ದೇಶ

ಈ ವರ್ಷ ಕಲ್ಲಿದ್ದಲು ಕೊರತೆ ಇಲ್ಲ: ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ

ಈ ವರ್ಷ ಮಾನ್ಸೂನ್ ಸಮಯದಲ್ಲಿ ದೇಶದಲ್ಲಿ ಯಾವುದೇ ಕಲ್ಲಿದ್ದಲು ಕೊರತೆ ಎದುರಾಗುವುದಿಲ್ಲ ಎಂದು ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ ಅವರು ಮಂಗಳವಾರ ಹೇಳಿದ್ದಾರೆ.

ಈ ವರ್ಷ ಕಲ್ಲಿದ್ದಲು ಕೊರತೆ ಇಲ್ಲ: ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ
ಪ್ರಹ್ಲಾದ್ ಜೋಶಿ
Published On :

ನವದೆಹಲಿ: ಈ ವರ್ಷ ಮಾನ್ಸೂನ್ ಸಮಯದಲ್ಲಿ ದೇಶದಲ್ಲಿ ಯಾವುದೇ ಕಲ್ಲಿದ್ದಲು ಕೊರತೆ ಎದುರಾಗುವುದಿಲ್ಲ ಎಂದು ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಅವರು ಮಂಗಳವಾರ ಹೇಳಿದ್ದಾರೆ.

ಇಂದು ಭೂಗತ ಕಲ್ಲಿದ್ದಲು ಗಣಿಗಾರಿಕೆ ಸಮಾವೇಶದಲ್ಲಿ ಮಾತನಾಡಿದ ಜೋಶಿ, ಕಲ್ಲಿದ್ದಲುಗಾಗಿ ಈ ವರ್ಷ ಏನೇ ಬೇಡಿಕೆ ಬಂದರೂ ಅದನ್ನು ಈಡೇರಿಸಲು ಸರ್ಕಾರ ಸನ್ನದ್ಧವಾಗಿದೆ ಎಂದು ತಿಳಿಸಿದರು.

ಈ ಬಾರಿ ಮುಂಗಾರು ಮಳೆಯಲ್ಲೂ ಕಲ್ಲಿದ್ದಲು ಕೊರತೆಯಾಗುವುದಿಲ್ಲ ಎಂದು ಕೋಲ್ ಇಂಡಿಯಾ ಹಾಗೂ ಕಲ್ಲಿದ್ದಲು ಸಚಿವಾಲಯದ ಪರವಾಗಿ ದೇಶಕ್ಕೆ ಭರವಸೆ ನೀಡುತ್ತೇನೆ. ತಯಾರಿ ಉತ್ತಮವಾಗಿದ್ದು, ಈ ವರ್ಷದ ಸಂಪೂರ್ಣ ಬೇಡಿಕೆಯನ್ನು ಪೂರೈಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಜೋಶಿ ಹೇಳಿದರು.

ಥರ್ಮಲ್ ಪವರ್ ಪ್ಲಾಂಟ್‌ಗಳಲ್ಲಿ 35 ಮಿಲಿಯನ್ ಟನ್(ಎಂಟಿ) ಕಲ್ಲಿದ್ದಲು ಇದ್ದರೆ, ಕೋಲ್ ಇಂಡಿಯಾ ಮತ್ತು ಖಾಸಗಿ ಗಣಿಗಾರರ ಪಿಟ್ ಹೆಡ್‌ಗಳಲ್ಲಿ 65 ಮೆಟ್ರಿಕ್ ಟನ್ ಮತ್ತು ಇನ್ನೂ 10-12 ಎಂಟಿ ವಿವಿಧ ಹಂತಗಳಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.