ಲಿವ್-ಇನ್ ಸಂಗಾತಿ ಹತ್ಯೆ: ದೇಹದ ಭಾಗ ತುಂಡು-ತುಂಡು ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಪಾಪಿ
ಕಳೆದ ವರ್ಷ ದೆಹಲಿಯಲ್ಲಿ ಶ್ರದ್ಧಾ ವಾಕರ್ ಕೃತ್ಯ ನಡೆದ ಬಳಿಕ ದೇಶದಲ್ಲಿ ಅಂಥದ್ದೇ ಭೀಕರ ಘಟನೆಗಳು ಹೆಚ್ಚಾಗಿ ನಡೆಯುತ್ತಿದೆ. ಈಗ ಮತ್ತೊಂದು ಭೀಭತ್ಸ ಘಟನೆ ಮುಂಬಯಿಯಲ್ಲಿ ನಡೆದಿದೆ.

ಮುಂಬಯಿ: ಕಳೆದ ವರ್ಷ ದೆಹಲಿಯಲ್ಲಿ ಶ್ರದ್ಧಾ ವಾಕರ್ ಕೃತ್ಯ ನಡೆದ ಬಳಿಕ ದೇಶದಲ್ಲಿ ಅಂಥದ್ದೇ ಭೀಕರ ಘಟನೆಗಳು ಹೆಚ್ಚಾಗಿ ನಡೆಯುತ್ತಿದೆ. ಈಗ ಮತ್ತೊಂದು ಭೀಭತ್ಸ ಘಟನೆ ಮುಂಬಯಿಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಸಂಗಾತಿಯನ್ನು ಹತ್ಯೆಗೈದು, ದೇಹದ ಭಾಗವನ್ನು ತುಂಡು ಮಾಡಿ ಅದನ್ನು ಕುಕ್ಕರ್ ನಲ್ಲಿ ಬೇಯಿಸಿರುವ ಘಟನೆ ಮುಂಬಯಿಯಲ್ಲಿ ನಡೆದಿದೆ.
ಮನೋಜ್ ಸಹಾನಿ (36) ಕಳೆದ ಮೂರು ವರ್ಷಗಳಿಂದ ಗೀತಾ ನಗರ 7ನೇ ಹಂತದ ಗೀತಾ ಆಕಾಶ್ ದೀಪ್ ಕಟ್ಟಡದಲ್ಲಿ 704 ಫ್ಲಾಟ್‌ನಲ್ಲಿ ಸರಸ್ವತಿ ವೈದ್ಯ (36) ಎಂಬುವವರೊಂದಿಗೆ ವಾಸವಾಗಿದ್ದ. ಮನೋಜ್ ಬೋರಿವಾಲಿಯಲ್ಲಿ ಸಣ್ಣ ಅಂಗಡಿ ನಡೆಸುತ್ತಿದ್ದಾರೆ.
ಬುಧವಾರ ಸಂಜೆ ಫ್ಲಾಟ್ ನ ಇತರೆ ಸದಸ್ಯರು ಮನೋಜ್ ಅವರ ನಿವಾಸದಿಂದ ಕೆಟ್ಟ ವಾಸನೆ ಬರುತ್ತಿರುವುದರಿಂದ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ನೋಡಿದಾಗ 3-4 ದಿನಗಳ ಹಿಂದೆ ಕೊಲೆಯಾಗಿರುವ ಮಹಿಳೆಯೊಬ್ಬರ ದೇಹದ ಭಾಗಗಳು ಕುಕ್ಕರ್ ನಲ್ಲಿ ಬೇಯುತ್ತಿರುವುದನ್ನು ಪೊಲೀಸರು ನೋಡಿದ್ದಾರೆ.
ಮನೋಜ್ ಸಹಾನಿ ಮತ್ತು ಸರಸ್ವತಿ ವೈದ್ಯ ಅವರು ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದರು. ಕೆಲವು ವಿಷಯಕ್ಕೆ ಇಬ್ಬರ ನಡುವೆ ಜಗಳವಾಗಿದೆ. ಇದೇ ವಿಚಾರಕ್ಕೆ ಈ ಕೃತ್ಯ ನಡೆದಿರಬಹುದು. ಆಕೆಯ ದೇಹವನ್ನು ಮರ ಕಟ್ ಮಾಡುವ ಮಿಷನ್ ನಿಂದ ತುಂಡು ಮಾಡಲಾಗಿದೆ ಎಂದಿದ್ದಾರೆ.
ನಾವು ಮನೆಗೆ ತಲುಪಿ ಬಾಗಿಲು ತೆರೆದಾಗ, ಇದು ಕೊಲೆಯ ಪ್ರಕರಣ ಎಂದು ನಮಗೆ ಗೊತ್ತಾಗಿದೆ. ಶಂಕಿತ ಆರೋಪಿ ಸಾಕ್ಷ್ಯವನ್ನು ಮರೆಮಾಡಲು ಪ್ರಯತ್ನಿಸುವ ಸಲುವಾಗಿ ಈ ರೀತಿ ದೇಹದ ಭಾಗವನ್ನು ಕುಕ್ಕರ್ ನಲ್ಲಿ ಬೇಯಿಸಿರಬಹುದು” ಎಂದು ಪೊಲೀಸ್ ಉಪ ಆಯುಕ್ತ ಜಯಂತ್ ಬಜ್ಬಲೆ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


