ದೇಶ

ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ: ಸದ್ಯಕ್ಕೆ ದೆಹಲಿಯಲ್ಲಿ ಬೈಕ್-ಟ್ಯಾಕ್ಸಿಗೆ ಅನುಮತಿ ಇಲ್ಲ

ಬೈಕ್-ಟ್ಯಾಕ್ಸಿ ಅಗ್ರಿಗೇಟರ್‌ಗಳಾದ Rapido ಮತ್ತು Uber ರಾಷ್ಟ್ರ ರಾಜಧಾನಿಯಲ್ಲಿ ಕಾರ್ಯನಿರ್ವಹಿಸಲು ಅನುಮತಿ ನೀಡಿದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.

ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ: ಸದ್ಯಕ್ಕೆ ದೆಹಲಿಯಲ್ಲಿ ಬೈಕ್-ಟ್ಯಾಕ್ಸಿಗೆ ಅನುಮತಿ ಇಲ್ಲ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಬೈಕ್-ಟ್ಯಾಕ್ಸಿ ಅಗ್ರಿಗೇಟರ್‌ಗಳಾದ Rapido ಮತ್ತು Uber ರಾಷ್ಟ್ರ ರಾಜಧಾನಿಯಲ್ಲಿ ಕಾರ್ಯನಿರ್ವಹಿಸಲು ಅನುಮತಿ ನೀಡಿದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.

ಹೈಕೋರ್ಟ್ ತೀರ್ಪಿನ ವಿರುದ್ಧ ದೆಹಲಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ  ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ರಾಜೇಶ್ ಬಿಂದಾಲ್ ಅವರ ರಜಾಕಾಲದ ಪೀಠ,  ಅರ್ಜಿಯನ್ನು ತ್ವರಿತ ವಿಚಾರಣೆ ನಡೆಸುವಂತೆ ಹೈಕೋರ್ಟ್ ಗೆ ಸೂಚಿಸಿದೆ.

ದೆಹಲಿ ಸರ್ಕಾರವು ನೀತಿಯನ್ನು ರೂಪಿಸುವವರೆಗೆ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸಲು ಅವಕಾಶ ನೀಡಬೇಕು ಎಂದು ಕೋರಿ ಬೈಕ್-ಟ್ಯಾಕ್ಸಿ ಅಗ್ರಿಗೇಟರ್‌ಗಳು ಅರ್ಜಿ ಸಲ್ಲಿಸಿದ್ದರು. ಆದರೆ ಇದಕ್ಕೆ ದೆಹಲಿ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು. ಈ ಮೂಲಕ ದೆಹಲಿಯಲ್ಲಿ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಿತ್ತು. ಇದರ ವಿರುದ್ಧ ರಾಪಿಡೊ ಮತ್ತು ಉಬರ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದವು. 

ರಾಪಿಡೊ ಮತ್ತು ಉಬರ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮೇ 26 ರಂದು ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿ ಆದೇಶಿಸಿತ್ತು. ಅಲ್ಲದೆ ಅಂತಿಮ ನೀತಿಯನ್ನು ಪ್ರಕಟಿಸುವವರೆಗೆ ಬೈಕ್-ಟ್ಯಾಕ್ಸಿ ಅಗ್ರಿಗೇಟರ್‌ಗಳ ವಿರುದ್ಧ ಯಾವುದೇ ದಬ್ಬಾಳಿಕೆ ಕ್ರಮ ತೆಗೆದುಕೊಳ್ಳಬಾರದು ಎಂದು ಹೈಕೋರ್ಟ್‌ ದೆಹಲಿ ಸರ್ಕಾರಕ್ಕೆ ಸೂಚಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.