ದೇಶ

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬಸ್-ಟ್ರಕ್ ನಡುವೆ ಡಿಕ್ಕಿ, ಮೂವರ ದುರ್ಮರಣ

ಮಧ್ಯಪ್ರದೇಶದ ಮೊರೆನಾದ ದೇವ್ ಪುರಿ ಬಾಬಾ ಪ್ರದೇಶದಲ್ಲಿ ಭೀಕರ ರಸ್ತೆ ಅಫಘಾತ ಸಂಭವಿಸಿದ್ದು, ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿದ ಪರಿಣಾಮ ಮೂವರು ದುರ್ಮರಣವನ್ನಪ್ಪಿ, 7 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬಸ್-ಟ್ರಕ್ ನಡುವೆ ಡಿಕ್ಕಿ, ಮೂವರ ದುರ್ಮರಣ
ಅಪಘಾತದಲ್ಲಿ ಜಖಂಗೊಂಡಿರುವ ವಾಹನ.
Published On :

ಮಧ್ಯಪ್ರದೇಶ: ಮಧ್ಯಪ್ರದೇಶದ ಮೊರೆನಾದ ದೇವ್ ಪುರಿ ಬಾಬಾ ಪ್ರದೇಶದಲ್ಲಿ ಭೀಕರ ರಸ್ತೆ ಅಫಘಾತ ಸಂಭವಿಸಿದ್ದು, ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿದ ಪರಿಣಾಮ ಮೂವರು ದುರ್ಮರಣವನ್ನಪ್ಪಿ, 7 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

ಘಟನೆಯ ಕುರಿತು ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಶೈಲೇಂದ್ರ ಸಿಂಗ್ ಚೌಹಾಣ್,  “ಗ್ವಾಲಿಯರ್‌ನಿಂದ ದೆಹಲಿಗೆ ಹೋಗುವ ಮಾರ್ಗದಲ್ಲಿ ಟ್ರಕ್ ಮತ್ತು ಪ್ರಯಾಣಿಕರ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಮತ್ತಷ್ಟು ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮೇ 31ರಂದು ಮಧ್ಯಪ್ರದೇಶದ ಹರ್ದಾ ಜಿಲ್ಲೆಯಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಕಾರು ಹೊತ್ತಿ ಉರಿದ ಪರಿಣಾಮ ಓರ್ವ ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.