ದೇಶ

ಆಂಧ್ರ ಪ್ರದೇಶ: ಕಾರು-ಸರಕು ವಾಹನ ಡಿಕ್ಕಿ, ನಾಲ್ವರ ಸಾವು

ಪೂರ್ವ ಗೋದಾವರಿ ಜಿಲ್ಲೆಯ ಮಡಿಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಸರಕು ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

ಆಂಧ್ರ ಪ್ರದೇಶ: ಕಾರು-ಸರಕು ವಾಹನ ಡಿಕ್ಕಿ, ನಾಲ್ವರ ಸಾವು
ಸಂಗ್ರಹ ಚಿತ್ರ
Published On :

ಪೂರ್ವ ಗೋದಾವರಿ (ಆಂಧ್ರಪ್ರದೇಶ): ಪೂರ್ವ ಗೋದಾವರಿ ಜಿಲ್ಲೆಯ ಮಡಿಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಸರಕು ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

ಘಟನೆಯಲ್ಲಿ ಕಾರಿನ ಚಾಲಕ ಮತ್ತು ಸರಕು ವಾಹನದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸಾವನ್ನಪ್ಪಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದಿರುವ ಕಾರೊಂದು ಸರಕು ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಚಾಲಕ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು ಮರಣೋತ್ತರ ಪರೀಕ್ಷೆಗಾಗಿ ಮಂದಪೇಟ ಏರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಸರ್ಕಲ್ ಇನ್ಸ್‌ಪೆಕ್ಟರ್ ರಜನಿ ಕುಮಾರ್ ಮಾಹಿತಿ ನೀಡಿದ್ದಾರೆ.

ಇನ್ನು ಘಟನೆಯಲ್ಲಿ ಗಾಯಗೊಂಡಿರುವ ಗಾಯಾಳುಗಳನ್ನು ರಾಜಾಜಿನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.