19 ವರ್ಷದ ಯುವತಿ ಮೇಲೆ ಇಬ್ಬರು ಸಹೋದರರಿಂದ ಅತ್ಯಾಚಾರ
ಮಧ್ಯಪ್ರದೇಶದ ಗ್ವಾಲಿಯರ್ ನಗರದಲ್ಲಿ 19 ವರ್ಷದ ಯುವತಿ ಮೇಲೆ ಇಬ್ಬರು ಸಹೋದರರು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್ ನಗರದಲ್ಲಿ 19 ವರ್ಷದ ಯುವತಿ ಮೇಲೆ ಇಬ್ಬರು ಸಹೋದರರು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಮೊರಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಂತ್ರಸ್ತೆ ದೆಹಲಿಯಲ್ಲಿ ಓದುತ್ತಿದ್ದು, ಗ್ವಾಲಿಯರ್‌ನಲ್ಲಿರುವ ತನ್ನ ಚಿಕ್ಕಪ್ಪನ ಮನೆಗೆ ಬಂದಿದ್ದಳು ಎಂದು ಪೊಲೀಸ್ ಉಪ ಅಧೀಕ್ಷಕ ವಿಜಯ್ ಸಿಂಗ್ ಭಡೋರಿಯಾ ತಿಳಿಸಿದ್ದಾರೆ.
ಹನುಮಾನ್ ಶಂಕರ್ ಕಾಲೋನಿಯಲ್ಲಿರುವ ಆರೋಪಿಗಳ ನಿವಾಸದೆದುರು ಹಾದುಹೋಗುತ್ತಿದ್ದಾಗ ಸಂತ್ರಸ್ತೆಯನ್ನು ಮನೆಯ ಒಳಗೆ ಎಳೆದುಕೊಂಡಿದ್ದಾರೆ. ಬಳಿಕ ಇಬ್ಬರು ಸಹೋದರರು ಅತ್ಯಾಚಾರ ಎಸಗಿದ್ದಾರೆ ಎಂದು ಅವರು ಹೇಳಿದರು.
ನಂತರ ಸಂತ್ರಸ್ತೆ ಪೊಲೀಸರಿಗೆ ದೂರು ದಾಖಲಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಇಬ್ಬರು ಆರೋಪಿಗಳ ವಿರುದ್ಧ ಸೂಕ್ತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಅವರ ಪತ್ತೆಗೆ ಪ್ರಯತ್ನಿಸಲಾಗುತ್ತಿದೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


