ದೆಹಲಿ: ಜೋಡಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
ರಾಷ್ಟ್ರ ರಾಜಧಾನಿ ನವದೆಹಲಿ ಆರ್ಕೆ ಪುರಂನಲ್ಲಿ ಇಬ್ಬರು ಸಹೋದರಿಯರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ದೆಹಲಿ ಪೊಲೀಸರು ಸೋಮವಾರ ಮಾಹಿತಿ ನೀಡಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿ ಆರ್ಕೆ ಪುರಂನಲ್ಲಿ ಇಬ್ಬರು ಸಹೋದರಿಯರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ದೆಹಲಿ ಪೊಲೀಸರು ಸೋಮವಾರ ಮಾಹಿತಿ ನೀಡಿದ್ದಾರೆ.
ಬಂಧಿತರನ್ನು ಕಿಶನ್ ಚೌಧರಿ (27) ಮತ್ತು ಗಣೇಶ್ ಸ್ವಾಮಿ (39) ಎಂದು ಗುರುತಿಸಲಾಗಿದೆ. ಇದರೊಂದಿಗೆ ಪ್ರಕರಣ ಸಂಬಂಧ ಒಟ್ಟು 5 ಮಂದಿಯನ್ನು ಬಂಧನಕ್ಕೊಳಪಡಿಸಲಾಗಿದೆ. ಈ ಹಿಂದೆ ಪ್ರಕರಣ ಸಂಬಂಧ ಅರ್ಜುನ್, ಮಿಕಲ್ ಮತ್ತು ದೇವ್ ಅವರನ್ನು ಬಂಧಿಸಲಾಗಿತ್ತು.
ಪ್ರಕರಣ ಸಂಬಂಧ ಟ್ವೀಟ್ ಮಾಡಿರುವ ದೆಹಲಿ ಪೊಲೀಸರು ಇಬ್ಬರು ಮಹಿಳೆಯರ ಗುಂಡಿಟ್ಟು ಹತ್ಯೆ ಮಾಡಿದ್ದ ಪ್ರಕರಣ ಸಂಬಂಧ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. 27 ವರ್ಷದ ಕಿಶನ್ ಮತ್ತು 39 ವರ್ಷದ ಗಣೇಶ್ ಸ್ವಾಮಿ ಎಂಬುವವರನ್ನು ಬಂಧಿಸಲಾಗಿದೆ. ಇದರೊಂದಿಗೆ ಪ್ರಕರಣ ಸಂಬಂಧ ಐವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಹೇಳಿದ್ದಾರೆ.
ಪಿಂಕಿ ಮತ್ತು ಜ್ಯೋತಿ ಎಂಬ ಇಬ್ಬರು ಸಹೋದರಿಯರನ್ನು ನಿನ್ನೆ ಆರ್ಕೆ ಪುರಂ ಪ್ರದೇಶದಲ್ಲಿ ಕೆಲ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


