ದೇಶ

ಕರ್ನಾಟಕ ಸೇರಿ 16 ರಾಜ್ಯಗಳಿಗೆ 56,415 ಕೋಟಿ ರೂ. ಬಂಡವಾಳ ಹೂಡಿಕೆ ಯೋಜನೆಗಳಿಗೆ ಕೇಂದ್ರ ಅಸ್ತು

ಬಜೆಟ್‌ನಲ್ಲಿ ಘೋಷಿಸಲಾದ ವಿಶೇಷ ನೆರವು ಯೋಜನೆಯಡಿ ಪ್ರಸಕ್ತ ಹಣಕಾಸು ವರ್ಷದಲ್ಲಿ 16 ರಾಜ್ಯಗಳಿಗೆ 56,415 ಕೋಟಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಕೇಂದ್ರ ಹಣಕಾಸು ಸಚಿವಾಲಯ ಅನುಮೋದನೆ ನೀಡಿದೆ.

ಕರ್ನಾಟಕ ಸೇರಿ 16 ರಾಜ್ಯಗಳಿಗೆ 56,415 ಕೋಟಿ ರೂ. ಬಂಡವಾಳ ಹೂಡಿಕೆ ಯೋಜನೆಗಳಿಗೆ ಕೇಂದ್ರ ಅಸ್ತು
ನಿರ್ಮಲಾ ಸೀತಾರಾಮನ್
Published On :

ನವದೆಹಲಿ: ಬಜೆಟ್‌ನಲ್ಲಿ ಘೋಷಿಸಲಾದ ವಿಶೇಷ ನೆರವು ಯೋಜನೆಯಡಿ ಪ್ರಸಕ್ತ ಹಣಕಾಸು ವರ್ಷದಲ್ಲಿ 16 ರಾಜ್ಯಗಳಿಗೆ 56,415 ಕೋಟಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಕೇಂದ್ರ ಹಣಕಾಸು ಸಚಿವಾಲಯ ಅನುಮೋದನೆ ನೀಡಿದೆ.

ರಾಜ್ಯಗಳಿಂದ ಬಂಡವಾಳ ವೆಚ್ಚವನ್ನು ಹೆಚ್ಚಿಸಲು 2023-24 ರ ಕೇಂದ್ರ ಬಜೆಟ್‌ನಲ್ಲಿ 'ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ವಿಶೇಷ ನೆರವು 2023-24' ಯೋಜನೆಯನ್ನು ಘೋಷಿಸಲಾಗಿತ್ತು. ಈ ಯೋಜನೆಯಡಿ ಕರ್ನಾಟಕಕ್ಕೆ 3647 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ.

ಆರೋಗ್ಯ, ಶಿಕ್ಷಣ, ನೀರಾವರಿ, ನೀರು ಸರಬರಾಜು, ವಿದ್ಯುತ್, ರಸ್ತೆಗಳು, ಸೇತುವೆಗಳು ಮತ್ತು ರೈಲ್ವೆ ಸೇರಿದಂತೆ ವಿವಿಧ ವಲಯಗಳಲ್ಲಿ ಬಂಡವಾಳ ಹೂಡಿಕೆ ಯೋಜನೆಗಳಿಗೆ ಕೇಂದ್ರ ಅನುಮೋದನೆ ನೀಡಿದೆ.

ಪಶ್ಚಿಮ ಬಂಗಾಳ, ಮಧ್ಯ ಪ್ರದೇಶ ಹಾಗೂ ಬಿಹಾರಕ್ಕೆ ಹೆಚ್ಚಿನ ನೆರವು ಘೋಷಿಸಲಾಗಿದೆ. ಈ ರಾಜ್ಯಗಳಿಗೆ ಕ್ರಮವಾಗಿ 7,523 ಕೋಟಿ ರೂ.7,850 ರೂ, ಹಾಗೂ 9,640 ಕೋಟಿ ರೂ. ಘೋಷಣೆ ಮಾಡಲಾಗಿದೆ.

ಬಂಡವಾಳ ಹೂಡಿಕೆ ಯೋಜನೆಯಡಿಯಲ್ಲಿ, ರಾಜ್ಯ ಸರ್ಕಾರಗಳಿಗೆ ವಿಶೇಷ ಸಹಾಯವನ್ನು 50 ವರ್ಷಗಳ ಬಡ್ಡಿ ರಹಿತ ಸಾಲದ ರೂಪದಲ್ಲಿ ನೀಡಲಾಗುತ್ತದೆ. 2023-24ರ ಹಣಕಾಸು ವರ್ಷದಲ್ಲಿ 1.3 ಲಕ್ಷ ಕೋಟಿ ರೂ. ನೀಡಲು ಘೋಷಣೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.