ಪ್ರತಿಕೂಲ ಹವಾಮಾನ: ಪಾಕ್ ವಾಯು ಪ್ರದೇಶ ಪ್ರವೇಶಿಸಿದ ಇಂಡಿಗೋ ವಿಮಾನ
ಪ್ರತಿಕೂಲ ಹವಾಮಾನದಿಂದಾಗಿ ಶ್ರೀನಗರ-ಜಮ್ಮು ಇಂಡಿಗೋ ವಿಮಾನ ಭಾನುವಾರ ಪಾಕಿಸ್ತಾನದ ವಾಯು ಪ್ರದೇಶವನ್ನು ಪ್ರವೇಶಿಸಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ಶ್ರೀನಗರ: ಪ್ರತಿಕೂಲ ಹವಾಮಾನದಿಂದಾಗಿ ಶ್ರೀನಗರ-ಜಮ್ಮು ಇಂಡಿಗೋ ವಿಮಾನ ಭಾನುವಾರ ಪಾಕಿಸ್ತಾನದ ವಾಯು ಪ್ರದೇಶವನ್ನು ಪ್ರವೇಶಿಸಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
"ಇಂಡಿಗೋ 6e-2124 ವಿಮಾನ ಪ್ರತಿಕೂಲ ಹವಾಮಾನದಿಂದಾಗಿ ಸ್ವಲ್ಪ ಸಮಯದವರೆಗೆ ಪಾಕಿಸ್ತಾನ ವಾಯು ಪ್ರದೇಶವನ್ನು ಪ್ರವೇಶಿಸಿತ್ತು. ನಂತರ ವಿಮಾನವನ್ನು ಅಮೃತಸರಕ್ಕೆ ತಿರುಗಿಸಲಾಯಿತು" ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನು ಓದಿ: ಇಂಡಿಗೋದಿಂದ ದಾಖಲೆಯ 500 ಏರ್ ಬಸ್ A320s ಖರೀದಿ!
ಇಂಡಿಗೋ ವಿಮಾನವು ಪಾಕಿಸ್ತಾನದ ವಾಯುಪ್ರದೇಶವನ್ನು ಪ್ರವೇಶಿಸುವ ಮೊದಲು ಎರಡೂ ದೇಶಗಳ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ವಿಮಾನದ ಮಾರ್ಗ ಬದಲಾವಣೆಯನ್ನು ಜಮ್ಮು ಮತ್ತು ಲಾಹೋರ್ ಎಟಿಸಿಗಳು ಉತ್ತಮವಾಗಿ ನಿರ್ವಹಿಸಿದ್ದರಿಂದ ವಿಮಾನ ಸುರಕ್ಷಿತವಾಗಿ ಅಮೃತಸರದಲ್ಲಿ ಲ್ಯಾಂಡ್ ಆಗಿದೆ ಎಂದು ಏರ್ಲೈನ್ಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ವಿಮಾನವು ಜಮ್ಮು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಕೆಟ್ಟ ಪ್ರತಿಕೂಲ ಹವಾಮಾನದ ಕಾರಣ ವಿಮಾನವನ್ನು ಅಮೃತಸರಕ್ಕೆ ಡೈವರ್ಟ್ ಮಾಡಲಾಗಿದೆ.
ಈ ತಿಂಗಳ ಆರಂಭದಲ್ಲಿ ಇದೇ ರೀತಿಯ ಘಟನೆಯಲ್ಲಿ ಇಂಡಿಗೋ ಅಮೃತಸರ-ಅಹಮದಾಬಾದ್ ವಿಮಾನವು ಕೆಟ್ಟ ಹವಾಮಾನದಿಂದಾಗಿ ಪಾಕಿಸ್ತಾನ ವಾಯುಪ್ರದೇಶವನ್ನು ಪ್ರವೇಶಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


