ಮಳೆ ಎಫೆಕ್ಟ್: ದೇಶಾದ್ಯಂತ ಟೊಮೇಟೊ ಬೆಲೆ ಗಗನಕ್ಕೆ!
ವಾತಾವರಣದಲ್ಲಿ ಉಂಟಾದ ವೈಪರೀತ್ಯಗಳಿಂದಾಗಿ ಆಹಾರ ತಯಾರಿಕೆಯಲ್ಲಿ ಬಹುಮುಖ್ಯವಾಗಿ ಬೇಕಾಗಿರುವ ಟೊಮೇಟೊ ಬೆಲೆ ಗಗನಕ್ಕೇರಿದೆ. ಒಂದು ಕಡೆ ಅತಿವೃಷ್ಟಿ, ಮತ್ತೊಂದೆಡೆ ಅನಾವೃಷ್ಟಿ ಕಾರಣದಿಂದಾಗಿ ದಿನನಿತ್ಯ ಅಡುಗೆಗೆ ಬೇಕಾದ ಟೊಮೇಟೊ ಬೆಲೆ ದಿಢೀರ್ ಏರಿಕೆಯಾಗಿದ್ದು, ಬಡವರು, ಮದ್ಯಮ ವರ್ಗದವರಿಗೆ ಕೈಗೆಟುಕದಂತಾಗಿದೆ.

ನವದೆಹಲಿ/ಬೆಂಗಳೂರು: ವಾತಾವರಣದಲ್ಲಿ ಉಂಟಾದ ವೈಪರೀತ್ಯಗಳಿಂದಾಗಿ ಆಹಾರ ತಯಾರಿಕೆಯಲ್ಲಿ ಬಹುಮುಖ್ಯವಾಗಿ ಬೇಕಾಗಿರುವ ಟೊಮೇಟೊ ಬೆಲೆ ಗಗನಕ್ಕೇರಿದೆ. ಒಂದು ಕಡೆ ಅತಿವೃಷ್ಟಿ, ಮತ್ತೊಂದೆಡೆ ಅನಾವೃಷ್ಟಿ ಕಾರಣದಿಂದಾಗಿ ದಿನನಿತ್ಯ ಅಡುಗೆಗೆ ಬೇಕಾದ ಟೊಮೇಟೊ ಬೆಲೆ ದಿಢೀರ್ ಏರಿಕೆಯಾಗಿದ್ದು, ಬಡವರು, ಮದ್ಯಮ ವರ್ಗದವರಿಗೆ ಕೈಗೆಟುಕದಂತಾಗಿದೆ.
ಒಂದು ಕೆಜಿ ಟೊಮೇಟೊ ಬೆಲೆ 80 ರಿಂದ 100 ರೂಪಾಯಿಗೆ ಮಾರಾಟವಾಗುತ್ತಿರುವುದು ಗ್ರಾಹಕರ ಕೈಸುಡುತ್ತಿದೆ. ಇದರಿಂದಾಗಿ ಜನರು ಟೊಮೇಟೊ ಬದಲಿಗೆ ಇತರೆ ಹುಳಿ ಪದಾರ್ಥಗಳತ್ತ ಚಿತ್ತ ಹರಿಸಿದ್ದಾರೆ. ಚಿಲ್ಲರೆ ಅಂಗಡಿ, ಹೋಲ್ ಸೇಲ್ ಅಂಗಡಿಗಳಲ್ಲಿ ಟೊಮೇಟೊ ಬೆಲೆ ಕೇಳಿ ಗ್ರಾಹಕರು ಹೌಹಾರುವಂತಾಗಿದೆ.
ಮೇ ಮತ್ತು ಜೂನ್ ತಿಂಗಳ ಆರಂಭದಲ್ಲಿ ಟೊಮೇಟೊಗೆ ಬೆಲೆ ಇರಲಿಲ್ಲ. ಆಗ ಕೆಜಿ ಟೊಮೇಟೊ ಕೇವಲ 30 ರಿಂದ 40 ರೂ.ಗೆ ಮಾರಾಟವಾಗಿತ್ತು. ಆದರೆ, ಕಳೆದ ಮೂರು ದಿನಗಳಿಂದ ಬೆಲೆಯಲ್ಲಿ ದಿಢೀರ್ ಏರಿಕೆಯಾಗಿದ್ದು, ದೇಶಾದ್ಯಂತ ಬೆಲೆಯಲ್ಲಿಎರಡು ಪಟ್ಟು ಹೆಚ್ಚಳವಾಗಿದೆ. ಉತ್ತರ ಭಾರತದ ಕಡೆಗಳಲ್ಲಿ ಭಾರೀ ಮಳೆಯಿಂದ ಟೊಮೋಟೊ ನೆಲ ಕಚ್ಚಿದ್ದರೆ, ಕರ್ನಾಟಕ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಮಳೆ ವಿಳಂಬ, ಅತಿಯಾದ ಉಷ್ಣಾಂಶ ಬೆಳೆ ಇಳುವರಿ ಕುಸಿತಕ್ಕೆ ಕಾರಣವಾಗಿದೆ. ಈ ಬೆಲೆ ಇನ್ನಷ್ಟು ದಿನ ಮುಂದುವರಿಯುವ ಸಾಧ್ಯತೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


