ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಬದರಿನಾಥ್ ಹೆದ್ದಾರಿಯಲ್ಲಿ ಸಿಲುಕಿದ 8,000 ಯಾತ್ರಾರ್ಥಿಗಳು
ಉತ್ತರಾಖಂಡದಲ್ಲಿ ಗುರುವಾರ ಭಾರೀ ಭೂಕುಸಿತ ಸಂಭವಿಸಿದ್ದು, ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ 8,000 ಯಾತ್ರಾರ್ಥಿಗಳು ಸಿಲುಕಿಕೊಂಡಿದ್ದಾರೆ.

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಗುರುವಾರ ಭಾರೀ ಭೂಕುಸಿತ ಸಂಭವಿಸಿದ್ದು, ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ 8,000 ಯಾತ್ರಾರ್ಥಿಗಳು ಸಿಲುಕಿಕೊಂಡಿದ್ದಾರೆ.
ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಚಿಂಕಾ ಗ್ರಾಮದಲ್ಲಿ ಭೂಕುಸಿತ ಸಂಭವಿಸಿದೆ. ಭೂಕುಸಿತದಿಂದ ಸುಮಾರು 100 ಮೀಟರ್ ನಷ್ಟು ಹೆದ್ದಾರಿ ಸಂಪೂರ್ಣ ಕೊಚ್ಚಿ ಹೋಗಿದೆ. ಹೆದ್ದಾರಿಯ ಎರಡೂ ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಸುಮಾರು ಆರು ಕಿಲೋಮೀಟರ್ ವರೆಗೆ ಟ್ರಾಫಿಕ್ ಜಾಮ್ ಆಗಿದೆ. ಸೇನಾ ಸಿಬ್ಬಂದಿ ಕೂಡ ಜಾಮ್‌ನಲ್ಲಿ ಸಿಲುಕಿಕೊಂಡಿದ್ದು, ತಡರಾತ್ರಿಯಾದರೂ ಹೆದ್ದಾರಿ ಸಂಚಾರ ಸರಿಪಡಿಸಲು ಸಾಧ್ಯವಾಗಿಲ್ಲ.
ಆಡಳಿತಾತ್ಮಕ ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ, ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಸಂಜೆಯವರೆಗೂ ವಾಹನಗಳು, ಯಾತ್ರಾರ್ಥಿಗಳು ಹೆದ್ದಾರಿಯಲ್ಲಿ ಸಿಲುಕಿಕೊಂಡಿದ್ದರು.
ಸಂಜೆ 6 ಗಂಟೆಗೆ ಹೆದ್ದಾರಿಯನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಚಮೋಲಿ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ನಂದ ಕಿಶೋರ್ ಜೋಶಿ ಅವರು ತಿಳಿಸಿದ್ದರು. ಆದರೆ ಕತ್ತಲೆಯಾದ ಕಾರಣ ಅವಶೇಷಗಳ ತೆರವು ಕಾರ್ಯಕ್ಕೆ ಅಡ್ಡಿಯಾಯಿತು. ಹೀಗಾಗಿ ಜಿಲ್ಲಾಡಳಿತ ಯಾತ್ರಾರ್ಥಿಗಳಿಗೆ ನೀರಿನ ಬಾಟಲಿ ಮತ್ತು ಬಿಸ್ಕತ್ತುಗಳನ್ನು ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


