ಜಮ್ಮು-ಕಾಶ್ಮೀರ: ಉಧಂಪುರದಲ್ಲಿ ಮಾದಕ ವಸ್ತು ಕಳ್ಳಸಾಗಣೆದಾರರ ಬಂಧನ, 100 ಕೆಜಿ ಡ್ರಗ್ಸ್ ವಶ
ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಮಾದಕ ವಸ್ತು ಕಳ್ಳ ಸಾಗಣೆ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಉಧಂಪುರ: ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಮಾದಕ ವಸ್ತು ಕಳ್ಳ ಸಾಗಣೆ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಉಧಂಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಮ್ಮು-ಕಾಶ್ಮೀರ ರಾಷ್ಟ್ರೀಯ ಹೆದ್ದಾರಿಯ ಬಳಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, 100 ಕೆಜಿಯಷ್ಟು ಡ್ರಗ್ಸ್ (ಗಸಗಸೆ ಸ್ಪ್ರಾ) ವಶಕ್ಕೆ ಪಡೆದಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 44ರ ಜಖಾನಿ ಚೆಕ್ ನಕಾ ಬಳಿ ವಾಹನಗಳ ತಪಾಸಣೆ ನಡೆಸುತ್ತಿದ್ದಾಗ ಪಂಜಾಬ್ ಕಡಗೆ ತೆರಳುತ್ತಿದ್ದ ಟ್ರಕ್ ನಲ್ಲಿ ಡ್ರಗ್ಸ್ ಕಂಡುಬಂದಿದ್ದು, ಟ್ರಕ್ ಚಾಲಕ ಹಾಗೂ ಸಹ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಉಧಂಪುರ ಪೊಲೀಸ್ ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


