ವಿದೇಶಿ ನೆಲದಲ್ಲಿ ಭಾರತದ ಪ್ರಜಾಪ್ರಭುತ್ವ, ರಾಜಕೀಯ, ಸಂಸದೀಯ ವ್ಯವಸ್ಥೆಯನ್ನು ರಾಹುಲ್ ಗಾಂಧಿ ಅವಮಾನಿಸಿದ್ದಾರೆ: ಬಿಜೆಪಿ
ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಲಂಡನ್‌ನಲ್ಲಿ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಬಿಜೆಪಿ ಮಂಗಳವಾರ ತೀವ್ರವಾಗಿ ವಾಗ್ದಾಳಿ ನಡೆಸಿದೆ.

ನವದೆಹಲಿ: ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಲಂಡನ್‌ನಲ್ಲಿ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಬಿಜೆಪಿ ಮಂಗಳವಾರ ತೀವ್ರವಾಗಿ ವಾಗ್ದಾಳಿ ನಡೆಸಿದೆ.
ನವದೆಹಲಿಯಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್, ರಾಹುಲ್ ಗಾಂಧಿ ಅವರು ಭಾರತದ ಪ್ರಜಾಪ್ರಭುತ್ವ, ಭಾರತದ ರಾಜಕೀಯ, ಭಾರತದ ಸಂಸತ್ತು, ಭಾರತದ ನ್ಯಾಯಾಂಗ ವ್ಯವಸ್ಥೆ ಮತ್ತು ಅದರ ಕಾರ್ಯತಂತ್ರದ ಭದ್ರತೆಯನ್ನು ವಿದೇಶಿ ನೆಲದಿಂದ ನಾಚಿಕೆಗೊಳಗಾಗಿಸುವ ಪ್ರಯತ್ನ ಮಾಡಿದ್ದಾರೆಂದು ಹೇಳಿದರು.
“ಪ್ರಜಾಪ್ರಭುತ್ವಗಳ ರಕ್ಷಕರಾದ ಯುರೋಪ್ ಮತ್ತು ಅಮೇರಿಕಾ ಭಾರತದಲ್ಲಿ ಪ್ರಜಾಪ್ರಭುತ್ವದ ದೊಡ್ಡ ಅಪಾಯದಲ್ಲಿ ಇದೆ ಎಂಬುದರ ಬಗ್ಗೆ ಏಕೆ ಮರೆತಿದ್ದಾರೆ” ಎಂದು ಲಂಡನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಹುಲ್ ಗಾಂಧಿ ಪ್ರಶ್ನಿಸಿದ್ದರು.
ಇದನ್ನು ಬಿಜೆಪಿ ವಕ್ತಾರ ರವಿಶಂಕರ್ ಪ್ರಸಾದ್ ಅವರು ಖಂಡಿಸಿದ್ದು,”ರಾಹುಲ್ ಅವರು ತಮ್ಮ ಭಾಷಣಗಳಲ್ಲಿ ಭಾರತದ ಪ್ರಜಾಪ್ರಭುತ್ವ, ರಾಜಕೀಯ, ಸಂಸತ್ತು, ರಾಜಕೀಯ ವ್ಯವಸ್ಥೆ ಮತ್ತು ನ್ಯಾಯಾಂಗ ವ್ಯವಸ್ಥೆಯನ್ನು ನಾಚಿಕೆಪಡಿಸಲು ಪ್ರಯತ್ನಿಸಿದ್ದಾರೆಂದು ತಿಳಿಸಿದರು. ಅಲ್ಲದೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸೋನಿಯಾ ಗಾಂಧಿ ಅವರು ರಾಹುಲ್ ಹೇಳಿಕೆಗಳಿಗೆ ಸ್ಪಷ್ಟನೆ ನೀಡಬೇಕಿದೆ ಎಂದು ಒತ್ತಾಯಿಸಿದರು.
ಇದನ್ನೂ ಓದಿ: ನಮ್ಮ ಸಂಸತ್ ನಲ್ಲಿ ಮೈಕ್ರೋಫೋನ್ ಗಳನ್ನು ನಿಶ್ಯಬ್ದಗೊಳಿಸಲಾಗುತ್ತಿದೆ: ಬ್ರಿಟೀಷ್ ಸಂಸದರಿಗೆ ರಾಹುಲ್ ಗಾಂಧಿ
“ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಲು ಯುರೋಪ್ ಮತ್ತು ಯುಎಸ್ ಮಧ್ಯಪ್ರವೇಶಿಸಬೇಕು ಎಂದು ರಾಹುಲ್ ಗಾಂಧಿ ಬಯಸುತ್ತಾರೆಯೆ? ಅದು ಯಾರ ಸರ್ಕಾರವಾದರೂ ಸರಿ ನಮ್ಮ ಆಂತರಿಕ ವ್ಯವಹಾರಗಳಲ್ಲಿ ಯಾವುದೇ ಹಸ್ತಕ್ಷೇಪವನ್ನು ನಾವು ಬಲವಾಗಿ ವಿರೋಧಿಸುತ್ತೇವೆ. ಯಾವುದೇ ವಿದೇಶಿ ರಾಷ್ಟ್ರವು ಭಾರತದ ಆಂತರಿಕ ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸಬಾರದು ಎಂದು ಹೇಳಿದರು.
ಮಲ್ಲಿಕಾರ್ಜುನ ಖರ್ಗೆ ಅವರೇ, ನೀವು ಕಾಂಗ್ರೆಸ್ಸಿನ ಚುನಾಯಿತ ಅಧ್ಯಕ್ಷರು ಎಂದು ನೀವು ಭಾವಿಸಿದ್ದೇ ಆದರೆ, ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಲು ಅಮೆರಿಕಾ ಮತ್ತು ಯುರೋಪ್ ಭಾರತದಲ್ಲಿ ಮಧ್ಯಪ್ರವೇಶಿಸಬೇಕು ಎಂಬ ರಾಹುಲ್ ಗಾಂಧಿಯವರ ಬೇಜವಾಬ್ದಾರಿ ಮತ್ತು ನಾಚಿಕೆಗೇಡಿನ ಹೇಳಿಕೆಗಳನ್ನು ನೀವು ಬೆಂಬಲಿಸುತ್ತೀರಾ? ಅವರ ಹೇಳಿಕೆಗಳನ್ನು ಖಂಡಿಸಿ. ಸೋನಿಯಾ ಕೂಡ ರಾಹುಲ್ ಅವರ ಸಂಪೂರ್ಣ ಬೇಜವಾಬ್ದಾರಿ ಹೇಳಿಕೆಗಳ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕೆಂದು ಬಿಜೆಪಿ ಒತ್ತಾಯಿಸುತ್ತದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


