'ಇಂದು ವಿದೇಶದಲ್ಲಿ ಭಾರತವನ್ನು ಟೀಕಿಸುವವರು...': ರಾಹುಲ್ ವಿರುದ್ಧ ಯುಪಿ ಸಿಎಂ ಯೋಗಿ ವಾಗ್ದಾಳಿ
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಲಂಡನ್‌ನಲ್ಲಿ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಗೋರಖ್‌ಪುರ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಲಂಡನ್‌ನಲ್ಲಿ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯತ್ತಿರುವಾಗ ಕೆಲವರು ದೇಶದ ಮಾನಹಾನಿ ಮಾಡಲು ಯತ್ನಿಸುತ್ತಿದ್ದಾರೆ ಎಂದು ಸಿಎಂ ಯೋಗಿ ಹೇಳಿದ್ದಾರೆ.
ಇಲ್ಲಿ ನಡೆದ ವಿಚಾರ ಸಂಕಿರಣವನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಯೋಗಿ, 'ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಜಾಗತಿಕ ವೇದಿಕೆಗಳಲ್ಲಿ ಭಾರತದ ಪ್ರಾಬಲ್ಯ ಹೆಚ್ಚುತ್ತಿದ್ದರೆ, ಕೆಲವರು ವಿದೇಶಿ ನೆಲದಲ್ಲಿ ಭಾರತವನ್ನು ಟೀಕಿಸುತ್ತಿದ್ದಾರೆ. ಇಂದು ಭಾರತದ ಪ್ರಜಾಪ್ರಭುತ್ವವನ್ನು ಟೀಕಿಸುವ ಜನರೇ ಅವಕಾಶ ಸಿಕ್ಕಾಗಲೆಲ್ಲ ಪ್ರಜಾಪ್ರಭುತ್ವದ ಕತ್ತು ಹಿಸುಕಿದ್ದಾರೆ ಎಂದು ರಾಹುಲ್ ಗಾಂಧಿಗೆ ತಿರುಗೇಟು ನೀಡಿದ್ದಾರೆ.
ಈ ಜನ ವಿದೇಶದಲ್ಲಿದ್ದಾಗ ದೇಶವನ್ನು ಟೀಕಿಸುತ್ತಾರೆ. ಆದರೆ ಅವರು ಮನೆಯಲ್ಲಿದ್ದಾಗ ಉತ್ತರ ಪ್ರದೇಶವನ್ನು ಟೀಕಿಸುತ್ತಾರೆ ಎಂದು ಮುಖ್ಯಮಂತ್ರಿ ಹೇಳಿದರು.
ಆದರೆ ಮುಂದಿನ ದಿನಗಳಲ್ಲಿ ಭಾರತ ಜಗತ್ತಿಗೆ ದಾರಿ ತೋರಿಸುವ ದೇಶವಾಗಲಿದೆ ಎಂದು ಉತ್ತರ ಪ್ರದೇಶ ಸಿಎಂ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


