ರಾಹುಲ್ ಗಾಂಧಿ ಕ್ಷಮೆ ಕೇಳಲು ಏನು ತಪ್ಪು ಮಾತನಾಡಿದ್ದಾರೆ, ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ ಅಷ್ಟೆ: ಮಲ್ಲಿಕಾರ್ಜುನ ಖರ್ಗೆ
ರಾಹುಲ್ ಗಾಂಧಿಯವರು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ, ರಾಹುಲ್ ಗಾಂಧಿಯವರು ಪ್ರಜಾಪ್ರಭುತ್ವದ ಬಗ್ಗೆ ಮಾತ್ರ ಮಾತನಾಡಿದ್ದಾರೆ. ವಿಷಯ ಮಂಡನೆ ಮಾಡುವಾಗ ಜನರು ತಮ್ಮ ಅಭಿಪ್ರಾಯ ಹೇಳುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಬೆಂಗಳೂರು: ರಾಹುಲ್ ಗಾಂಧಿಯವರು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ, ರಾಹುಲ್ ಗಾಂಧಿಯವರು ಪ್ರಜಾಪ್ರಭುತ್ವದ ಬಗ್ಗೆ ಮಾತ್ರ ಮಾತನಾಡಿದ್ದಾರೆ. ವಿಷಯ ಮಂಡನೆ ಮಾಡುವಾಗ ಜನರು ತಮ್ಮ ಅಭಿಪ್ರಾಯ ಹೇಳುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಇಂಗ್ಲೆಂಡಿನಲ್ಲಿ ಸಾರ್ವಜನಿಕ ಭಾಷಣ ಮಾಡುವಾಗ ರಾಹುಲ್ ಗಾಂಧಿಯವರು ಭಾರತ ದೇಶದ ಬಗ್ಗೆ ಅವಹೇಳನ ಮಾಡಿದ್ದಾರೆ, ದೇಶಕ್ಕೆ ಅಪಮಾನ ಮಾಡಿದ್ದಾರೆ, ದೇಶದ ಮುಂದೆ ಅವರು ಕ್ಷಮೆಯಾಚಿಸಬೇಕು ಎಂದು ಆಡಳಿತ ಪಕ್ಷದ ಸದಸ್ಯರು ಒತ್ತಾಯಿಸುತ್ತಿರುವ ಕುರಿತಂತೆ ಅಭಿಪ್ರಾಯ ಕೇಳಿದಾಗ ಎಎನ್ ಐ ಸುದ್ದಿಸಂಸ್ಥೆಗೆ ಮಲ್ಲಿಕಾರ್ಜುನ ಖರ್ಗೆ ಹೀಗೆ ಹೇಳಿದ್ದಾರೆ.
ರಾಹುಲ್ ಗಾಂಧಿಯವರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸುತ್ತಿರುವವರಲ್ಲಿ ನಾನು ಒಂದು ಮಾತು ಕೇಳುತ್ತೇನೆ, ಪ್ರಧಾನಿ ಮೋದಿಯವರು 5-6 ದೇಶಗಳಿಗೆ ಹೋಗಿ ಅಲ್ಲಿ ಮಾತನಾಡುವಾಗ ನಮ್ಮ ದೇಶದ ಜನರನ್ನು ಅವಮಾನಿಸಿದ್ದಾರೆ. ಭಾರತದಲ್ಲಿ ಹುಟ್ಟುವುದು ಪಾಪ, ಅಪರಾಧ ಎಂದು ಹೇಳಿದ್ದಾರೆ. ಹಾಗಿದ್ದರೆ ಅವರು ಮಾಡಿದ್ದು ಅಪಮಾನವಲ್ಲವೇ, ಅವರೇಕೆ ಕ್ಷಮೆ ಕೇಳಲಿಲ್ಲ ಎಂದು ಪ್ರಶ್ನಿಸಿದರು.
ರಾಹುಲ್ ಗಾಂಧಿಯವರ ಮಾತುಗಳನ್ನು ಆಕ್ಷೇಪಿಸುವ ಮೂಲಕ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಗಳನ್ನು ದುರ್ಬಲಗೊಳಿಸಲಾಗುತ್ತಿದೆ. ಸತ್ಯ ಮಾತನಾಡುವವರನ್ನು ಜೈಲಿಗೆ ಕಳುಹಿಸಲಾಗುತ್ತದೆ. ಇಂತಹ ವಾತಾವರಣ ಪ್ರಜಾಪ್ರಭುತ್ವಕ್ಕೆ ಮಾರಕವಲ್ಲವೇ ಎಂದು ಕೇಳಿದರು.
ಹೀಗಾಗಿ ರಾಹುಲ್ ಗಾಂಧಿಯವರು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ, ಪ್ರಧಾನ ಮಂತ್ರಿಗಳು ಅನೇಕ ದೇಶಗಳಿಗೆ ಹೋಗಿ ಇಲ್ಲಿನ ಜನರ ಸಂಸ್ಕೃತಿ ಮತ್ತು ಮಾನವೀಯತೆಯನ್ನು ಅವಮಾನಿಸಿದ್ದೀರಿ ಎಂದು ನಾವು ಹೇಳುತ್ತೇವೆ. ರಾಹುಲ್ ಗಾಂಧಿ ಕೇವಲ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡಿದ್ದಾರೆ. ಜನರು ಚರ್ಚೆಗೆ ಹೋದಾಗ, ಅವರು ತಮ್ಮ ಅಭಿಪ್ರಾಯಗಳನ್ನು ಮಂಡಿಸುವುದು ಸಹಜ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


