ಕೋವಿಡ್ ಪ್ರಕರಣಗಳ ಏರಿಕೆ: 24 ಗಂಟೆಗಳಲ್ಲಿ 918 ಹೊಸ ಕೊರೊನಾವೈರಸ್ ಸೋಂಕು, ನಾಲ್ವರು ಸಾವು
ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 918 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 6,350ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 918 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 6,350ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.
ಇದೇ ಅವಧಿಯಲ್ಲಿ, ರಾಜಸ್ಥಾನದಲ್ಲಿ 2, ಕರ್ನಾಟಕ ಮತ್ತು ಕೇರಳದಲ್ಲಿ ತಲಾ ಒಬ್ಬರು ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ. ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 5,30,806 ಕ್ಕೆ ಏರಿಕೆಯಾಗಿದೆ.
ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ದೈನಂದಿನ ಪಾಸಿಟಿವಿಟಿ ದರ ಶೇ 2.08ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ 0.86ರಷ್ಟಿದೆ. ದೇಶದಾದ್ಯಂತ ಈವರೆಗೆ 4,46,96,338 ಮಂದಿಗೆ ಸೋಂಕು ತಲುಲಿದೆ ಎಂದು ಸಚಿವಾಲಯ ತಿಳಿಸಿದೆ.
ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.01ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್-19 ಚೇತರಿಕೆ ದರ ಶೇ 98.8ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 44,225 ಪರೀಕ್ಷೆಗಳೊಂದಿಗೆ ಈವರೆಗೆ 92.03 ಕೋಟಿಗೂ ಅಧಿಕ ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.
ದೇಶದಾದ್ಯಂತ ಈವರೆಗೆ 4,41,59,182 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೈನಂದಿನ ಮರಣ ಪ್ರಮಾಣ ಶೇ 1.19ರಷ್ಟಿದೆ. ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 220.65 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


