ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,803 ಪ್ರಕರಣಗಳು ಪತ್ತೆ, ಸಕ್ರಿಯ ಪ್ರಕರಣ ಸಂಖ್ಯೆ 10,300ಕ್ಕೆ ಏರಿಕೆ
ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,803 ಹೊಸ ಪ್ರಕರಣಗಳು ಪತ್ತೆಯಾಗಿವೆ.

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,803 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,47,05,952ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,837ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 10,300ಕ್ಕೆ ತಲುಪಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,41,64,815 ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 56,551 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 92,10,40,337 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಇದನ್ನೂ ಓದಿ: ಕೋವಿಡ್ ಜೊತೆಗೆ ರಾಜ್ಯದಲ್ಲಿ ಹೆಚ್ಚಿದ ಫ್ಲೂ ವೈರಸ್ ಗಳ ಕಾಟ: ಆತಂಕ ಬೇಡ, ಎಚ್ಚರಿಕೆ ವಹಿಸಿ ಎಂದ ಆರೋಗ್ಯ ಇಲಾಖೆ!
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 220,65,54,022 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


