ನವದೆಹಲಿ: ಏಪ್ರಿಲ್ 22 ರೊಳಗೆ ಅಧಿಕೃತ ಬಂಗಲೆ ಖಾಲಿ ಮಾಡುವಂತೆ ರಾಹುಲ್ ಗಾಂಧಿಗೆ ಸೂಚನೆ
ಅನರ್ಹಗೊಂಡ ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಅವರಿಗೆ ನೀಡಲಾದ ಅಧಿಕೃತ ಬಂಗಲೆಯನ್ನು ಏಪ್ರಿಲ್ 22 ರೊಳಗೆ ಖಾಲಿ ಮಾಡುವಂತೆ ಸೂಚಿಸಲಾಗಿದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.

ನವದೆಹಲಿ: ಅನರ್ಹಗೊಂಡ ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಅವರಿಗೆ ನೀಡಲಾದ ಅಧಿಕೃತ ಬಂಗಲೆಯನ್ನು ಏಪ್ರಿಲ್ 22 ರೊಳಗೆ ಖಾಲಿ ಮಾಡುವಂತೆ ಸೂಚಿಸಲಾಗಿದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.
ಕಳೆದ ವಾರ ಅನರ್ಹತೆಯ ನೋಟಿಸ್ ನೀಡಿದ ನಂತರ 12 ತುಘಲಕ್ ಮಾರ್ಗದ ಬಂಗಲೆಯನ್ನು ಖಾಲಿ ಮಾಡುವಂತೆ ಗಾಂಧಿ ಅವರಿಗೆ ಲೋಕಸಭೆಯ ವಸತಿ ಸಮಿತಿಯಿಂದ ನೋಟಿಸ್ ನೀಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನಹಾನಿ ಹೇಳಿಕೆ ಪ್ರಕರಣದಲ್ಲಿ ಗುಜರಾತ್‌ನ ಸ್ಥಳೀಯ ನ್ಯಾಯಾಲಯ ಮಾರ್ಚ್ 23 ರಂದು ಗಾಂಧಿಯನ್ನು ದೋಷಿ ಎಂದು ಘೋಷಿಸಿತು ಮತ್ತು ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತು.
ಅನರ್ಹಗೊಂಡ ಲೋಕಸಭಾ ಸದಸ್ಯರು ಸದಸ್ಯತ್ವವನ್ನು ಕಳೆದುಕೊಂಡ ಒಂದು ತಿಂಗಳೊಳಗೆ ಅಧಿಕೃತ ಬಂಗಲೆಯನ್ನು ಖಾಲಿ ಮಾಡಬೇಕು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಆ ಬಂಗಲೆಯಲ್ಲಿಯೇ ಉಳಿಯಲು ರಾಹುಲ್ ಗಾಂಧಿ ವಸತಿ ಸಮಿತಿಗೆ ಪತ್ರ ಬರೆಯಬಹುದು, ಆ ಮನವಿಯನ್ನು ಸಮಿತಿಯೂ ಪರಿಗಣಿಸಬಹುದು ಎಂದು ಮತ್ತೋರ್ವ ಅಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


