ದೆಹಲಿ ಅಬಕಾರಿ ನೀತಿ ಹಗರಣ: ಇ.ಡಿ. ಯಿಂದ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಪಿಎ ವಿಚಾರಣೆ
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿನ ಬೆಳವಣಿಗೆಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಮಂಗಳವಾರ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಆಪ್ತ ಸಹಾಯಕ (ಪಿಎ) ದೇವೇಂದ್ರ ಶರ್ಮಾ ಅವರನ್ನು ವಿಚಾರಣೆ ನಡೆಸಿದೆ.

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿನ ಬೆಳವಣಿಗೆಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಮಂಗಳವಾರ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಆಪ್ತ ಸಹಾಯಕ (ಪಿಎ) ದೇವೇಂದ್ರ ಶರ್ಮಾ ಅವರನ್ನು ವಿಚಾರಣೆ ನಡೆಸುತ್ತಿದೆ.
ಹಣ ಅಕ್ರಮ ವರ್ಗಾವಣೆ ವಿರೋಧಿ ಸಂಸ್ಥೆಯು ಮತ್ತೆ ತನಿಖೆಗೆ ಹಾಜರಾಗುವಂತೆ ಶರ್ಮಾ ಅವರಿಗೆ ಸೂಚಿಸಿತ್ತು. ಅದರಂತೆ, ವಿಚಾರಣೆಗೆ ಹಾಜರಾಗಿದ್ದು, ಸದ್ಯ ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಕಳೆದ ಬಾರಿ ಅವರು ಮನೀಶ್ ಸಿಸೋಡಿಯಾ ಅವರೊಂದಿಗೆ ವಿಚಾರಣೆಯನ್ನು ಎದುರಿಸಿದ್ದರು. ಮಾಜಿ ಕಾರ್ಯದರ್ಶಿ ಸಿ.ಅರವಿಂದ್, ಅಬಕಾರಿ ಕಾರ್ಯದರ್ಶಿ ಅರವ ಗೋಪಿ ಕೃಷ್ಣ ಮತ್ತು ಸಂಜಯ್ ಗೋಯಲ್ ಅವರನ್ನು ಒಟ್ಟಿಗೆ ವಿಚಾರಣೆ ನಡೆಸುವುದಾಗಿ ಇ.ಡಿ ಈ ಹಿಂದೆಯೇ ನ್ಯಾಯಾಲಯಕ್ಕೆ ತಿಳಿಸಿತ್ತು.
ಈ ಪ್ರಕರಣದಲ್ಲಿ ಇ.ಡಿ ಇದೀಗ ಒಂದು ಚಾರ್ಜ್ ಶೀಟ್ ಮತ್ತು ಪೂರಕ ಚಾರ್ಜ್ ಶೀಟ್ ಸಲ್ಲಿಸಿದೆ. ಶೀಘ್ರದಲ್ಲೇ ಎರಡನೇ ಪೂರಕ ಚಾರ್ಜ್ ಶೀಟ್ ಸಲ್ಲಿಸಲು ಅಧಿಕಾರಿಗಳು ಸಜ್ಜಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


