ದೇಶ

ನನ್ನ ತಾತ ಬ್ರಿಟಿಷರಲ್ಲಿ ಕ್ಷಮೆಯಾಚಿಸಿರುವುದನ್ನು ಸಾಬೀತುಪಡಿಸಿ: ರಾಹುಲ್ ಗಾಂಧಿಗೆ ಸಾವರ್ಕರ್ ಮೊಮ್ಮಗ ಸವಾಲು

ನನ್ನ ಹೆಸರು ಸಾವರ್ಕರ್‌ ಅಲ್ಲ, ಗಾಂಧಿ. ಗಾಂಧಿ ಎಂದಿಗೂ ಕ್ಷಮೆ ಕೇಳುವುದಿಲ್ಲ' ಎಂದು ಹೇಳಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಹಿಂದೂ ರಾಷ್ಟ್ರವಾದಿ ವಿ.ಡಿ. ಸಾವರ್ಕರ್‌ ಅವರ ಮೊಮ್ಮಗ ಕಿಡಿಕಾರಿದ್ದಾರೆ.

ನನ್ನ ತಾತ ಬ್ರಿಟಿಷರಲ್ಲಿ ಕ್ಷಮೆಯಾಚಿಸಿರುವುದನ್ನು ಸಾಬೀತುಪಡಿಸಿ: ರಾಹುಲ್ ಗಾಂಧಿಗೆ ಸಾವರ್ಕರ್ ಮೊಮ್ಮಗ ಸವಾಲು
ರಾಹುಲ್ ಗಾಂಧಿ
Published On :

ನವದೆಹಲಿ: ನನ್ನ ಹೆಸರು ಸಾವರ್ಕರ್‌ ಅಲ್ಲ, ಗಾಂಧಿ. ಗಾಂಧಿ ಎಂದಿಗೂ ಕ್ಷಮೆ ಕೇಳುವುದಿಲ್ಲ' ಎಂದು ಹೇಳಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಹಿಂದೂ ರಾಷ್ಟ್ರವಾದಿ ವಿ.ಡಿ. ಸಾವರ್ಕರ್‌ ಅವರ ಮೊಮ್ಮಗ ಕಿಡಿಕಾರಿದ್ದಾರೆ.

ತಮ್ಮ ತಾತ ಬ್ರಿಟೀಷರ ಬಳಿ ಕ್ಷಮೆ ಕೇಳಿದ್ದರು ಎಂಬುದನ್ನು ಸಾಬೀತು ಮಾಡಿ ಎಂದು ಸವಾಲು ಹಾಕಿದ್ದಾರೆ. ರಾಹುಲ್‌ ಗಾಂಧಿಯವರು ಕ್ರಿಮಿನಲ್‌ ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಲೋಕಸಭೆ ಸದಸ್ಯತ್ವ ಕಳೆದುಕೊಂಡ ಬಳಿಕ ನಡೆಸಿದ್ದ ಮೊದಲ ಸುದ್ದಿಗೋಷ್ಠಿಯಲ್ಲಿ, ಸಾವರ್ಕರ್‌ ಹೆಸರು ಉಲ್ಲೇಖಿಸಿ ಹೇಳಿಕೆ ನೀಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಾವರ್ಕರ್‌ ಮೊಮ್ಮಗ ರಂಜಿತ್‌ ಸಾವರ್ಕರ್‌, 'ಕ್ಷಮೆ ಕೇಳಲು ನಾನೇನು ಸಾವರ್ಕರ್‌ ಅಲ್ಲ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ಸಾವರ್ಕರ್‌ ಕ್ಷಮೆ ಕೇಳಿದ್ದರು ಎಂಬುದನ್ನು ಸಾಬೀತು ಮಾಡುವ ದಾಖಲೆಗಳನ್ನು ತೋರಿಸುವಂತೆ ಅವರಿಗೆ ಸವಾಲು ಹಾಕುತ್ತೇನೆ' ಎಂದಿದ್ದಾರೆ.

ರಾಜಕೀಯ ಪ್ರಚಾರಕ್ಕಾಗಿ ದೇಶಪ್ರೇಮಿಗಳ ಹೆಸರುಗಳನ್ನು ಬಳಸುವುದು ತಪ್ಪು ಮತ್ತು ಶೋಚನೀಯ. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು' ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.