ಜಮ್ಮು-ಕಾಶ್ಮೀರ: ಕಥುವಾದಲ್ಲಿ ಪ್ರಬಲ ಸ್ಫೋಟ, ಸ್ಥಳದಲ್ಲಿ ಕಾರ್ಯಾಚರಣೆಗಿಳಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಹೀರಾನಗರದಲ್ಲಿ ಬುಧವಾರ ರಾತ್ರಿ ಪ್ರಬಲ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಸ್ಥಳೀಯ ಜನತೆ ಬೆಚ್ಚಿ ಬಿದ್ದಿದೆ.

ಕಥುವಾ (ಜಮ್ಮು-ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಹೀರಾನಗರದಲ್ಲಿ ಬುಧವಾರ ರಾತ್ರಿ ಪ್ರಬಲ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಸ್ಥಳೀಯ ಜನತೆ ಬೆಚ್ಚಿ ಬಿದ್ದಿದೆ.
ಜಮ್ಮು ಮತ್ತು ಕಾಶ್ಮೀರದ ಹಿರಾನಗರದ (ಕತುವಾ) ಸನ್ಯಾಲ್‌ನಲ್ಲಿರುವ ಭಾರತ-ಪಾಕ್ ಗಡಿಗಿಂತ ನಾಲ್ಕು ಕಿಲೋಮೀಟರ್ ಮೊದಲು ಗಡಿ ಪೊಲೀಸ್ ಪೋಸ್ಟ್ ಬಳಿಯ ಅರಣ್ಯ ಪ್ರದೇಶದಲ್ಲಿ ಈ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.
ಸ್ಫೋಟ ಹಿನ್ನೆಲೆಯಲ್ಲಿ ಎಸ್‌ಎಸ್‌ಪಿ ಶಿವದೀಪ್ ಸಿಂಗ್ ಜಮ್ವಾಲ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ತಪಾಸಣೆ ನಡೆಸುತ್ತಿದ್ದಾರೆ. ಸ್ಫೋಟ ಯಾವ ರೀತಿ ಸಂಭವಿಸಿದೆ ಎಂಬುದಕ್ಕೆ ಸ್ಪಷ್ಟ ಮಾಹಿತಿಗಳು ಲಭ್ಯವಾಗಿಲ್ಲ. ಈ ನಿಟ್ಟಿನಲ್ಲಿ ತನಿಖೆ ಮುಂದುವರೆದಿದೆ ಎಂದು ತಿಳಿದುಬಂದಿದೆ.
ಸ್ಫೋಟ ಸಂಭವಿಸಿದ ಸ್ಥಳದಲ್ಲಿ ದೊಡ್ಡ ಕುಳಿ ನಿರ್ಮಾಣವಾಗಿದೆ. ಸಮೀಪದಲ್ಲೇ ಸೇತುವೆಯೂ ಇದ್ದು, ಸುತ್ತಮುತ್ತಲಿನ ಹೊಲಗಳಲ್ಲಿ ಬೆಳೆ ಬೆಳೆಯಲಾಗಿದೆ. ಮೂಲಗಳ ಪ್ರಕಾರ, ಇದು ಐಇಡಿಯಂತೆ ಸ್ಫೋಟವೆಂದು ಹೇಳಲಾಗುತ್ತಿದ್ದು, ಈ ಮಾಹಿತಿಗಳ ಬಗ್ಗೆ ಅಧಿಕಾರಿಗಳು ಸ್ಪಷ್ಟನೆ ನೀಡಿಲ್ಲ.
ಈ ನಡುವೆ ಸ್ಫೋಟ ಸಂಭವಿಸಿದ ಸ್ಥಳಕ್ಕೆ ಭಾರತೀಯ ಸೇನಾಪಡೆ ಭೇಟಿ ನೀಡಿದ್ದು, ಕಾರ್ಯಾಚರಣೆ ವೇಳೆ ಲೈವ್ ಗ್ರೆನೇಡ್ ವೊಂದನ್ನು ವಶಪಡಿಸಿಕೊಂಡಿದೆ ಎಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


