ಮಣಿಪುರ ಹಿಂಸಾಚಾರ: ಶಾಂತಿ ಮರುಸ್ಥಾಪಿಸಿ- ಅಮಿತ್ ಶಾ, ಪ್ರಧಾನಿ ಮೋದಿಗೆ ಮಮತಾ ಬ್ಯಾನರ್ಜಿ ಆಗ್ರಹ
ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಶಾಂತಿ ಮರುಸ್ಥಾಪಿಸುವಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಆಗ್ರಹಿಸಿದ್ದಾರೆ.

ಕೋಲ್ಕತಾ: ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಶಾಂತಿ ಮರುಸ್ಥಾಪಿಸುವಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಆಗ್ರಹಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಮಣಿಪುರದ ಪರಿಸ್ಥಿತಿ ತೀವ್ರ ಕಳವಳವನ್ನುಂಟು ಮಾಡಿದೆ. ಈ ಸಮಯದಲ್ಲಿ ರಾಜಕೀಯ ಮಾಡಬಾರದು. ರಾಜಕೀಯ, ಚುನಾವಣೆಗಳು ಇದ್ದೇ ಇರುತ್ತದೆ. ಆದರೆ, ನಮ್ಮ ಸುಂದರ ರಾಜ್ಯ ಮಣಿಪುರವನ್ನು ಮೊದಲು ರಕ್ಷಿಸಬೇಕು. ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಪ್ರಧಾನಿ ಮತ್ತು ಗೃಹ ಸಚಿವರಿಗೆ ಮನವಿ ಮಾಡಿಕೊಳ್ಳುತ್ತಿದ್ದೇನೆ. ಶಾಂತಿ ಮತ್ತು ಸೌಹಾರ್ದತೆಯನ್ನು ಎತ್ತಿಹಿಡಿಯುವಂತೆ ಮಣಿಪುರದ ನಮ್ಮ ಸಹೋದರ ಸಹೋದರಿಯರಿಗೆ ಮನವಿ ಮಾಡಿಕೊಳ್ಳುತ್ತಿದ್ದೇನೆಂದು ಹೇಳಿದ್ದಾರೆ.
ಗುಡ್ಡಗಾಡು ಜಿಲ್ಲೆಯಾದ ಚುರಾಚಂದ್‌ಪುರದಿಂದ ರಾಜಧಾನಿ ಇಂಫಾಲ್‌ವರೆಗೆ ಮಣಿಪುರ ರಾಜ್ಯಾದ್ಯಂತ ಕುಕಿ ಬುಡಕಟ್ಟು ಜನಾಂಗ ಮತ್ತು ಬಹುಸಂಖ್ಯಾತ ಮೈತಿ ಸಮುದಾಯದ ನಡುವಿನ ಹಿಂಸಾಚಾರ ಭುಗಿಲೆದ್ದಿದ್ದು, ಪರಿಸ್ಥಿತಿ ಕೈಮೀರಿದರೆ, ಕಂಡಲ್ಲಿ ಗುಂಡು ಹಾರಿಸುವಂತೆ ಮಣಿಪುರ ಸರ್ಕಾರ ಆದೇಶಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


