ದೇಶ

ಜೋಡಿಯ ಲಿಪ್‌ಲಾಕ್‌ ವಿಡಿಯೋ ವೈರಲ್; ಅಶ್ಲೀಲವಾಗಿ ವರ್ತಿಸದಂತೆ ದೆಹಲಿ ಮೆಟ್ರೋ ಮನವಿ

ರಾಷ್ಟ್ರ ರಾಜಧಾನಿ ದೆಹಲಿ ಮೆಟ್ರೋ ಇತ್ತೀಚಿಗೆ ಹಲವು ನೆಗೆಟಿವ್ ವಿಚಾರಗಳಿಂದಲೇ ಸುದ್ದಿಯಾಗುತ್ತಿದ್ದು, ಕೋಚ್‌ನ ನೆಲದ ಮೇಲೆ ಕುಳಿತು ಯುವ ಜೋಡಿಯೊಂದು ಪರಸ್ಪರ ಚುಂಬಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಜೋಡಿಯ ಲಿಪ್‌ಲಾಕ್‌ ವಿಡಿಯೋ ವೈರಲ್; ಅಶ್ಲೀಲವಾಗಿ ವರ್ತಿಸದಂತೆ ದೆಹಲಿ ಮೆಟ್ರೋ ಮನವಿ
ಜೋಡಿಯ ಲಿಪ್‌ಲಾಕ್‌ ವಿಡಿಯೋ ವೈರಲ್
Published On :

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮೆಟ್ರೋ ಇತ್ತೀಚಿಗೆ ಹಲವು ನೆಗೆಟಿವ್ ವಿಚಾರಗಳಿಂದಲೇ ಸುದ್ದಿಯಾಗುತ್ತಿದ್ದು, ಕೋಚ್‌ನ ನೆಲದ ಮೇಲೆ ಕುಳಿತು ಯುವ ಜೋಡಿಯೊಂದು ಪರಸ್ಪರ ಚುಂಬಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ದೆಹಲಿ ಮೆಟ್ರೋ ರೈಲು ನಿಗಮ, ತನ್ನ ಪ್ರಯಾಣಿಕರಿಗೆ ಇಂತಹ ಅಶ್ಲೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದಂತೆ ಮನವಿ ಮಾಡಿದೆ.

ಇಂತಹ ಘಟನೆಗಳನ್ನು "ಸಮೀಪದ ಲಭ್ಯವಿರುವ ಮೆಟ್ರೋ ಸಿಬ್ಬಂದಿ  ಅಥವಾ ಸಿಐಎಸ್ಎಫ್ ಸಿಬ್ಬಂದಿಗೆ ತಕ್ಷಣ ತಿಳಿಸಬೇಕು. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬಹುದು" ಎಂದು ಮೆಟ್ರೋ ಅಧಿಕಾರಿಗಳು ಪ್ರಯಾಣಿಕರಿಗೆ ಮನವಿ ಮಾಡಿದ್ದಾರೆ.

ಈ ಯುವ ಜೋಡಿಯ ಲಿಪ್ ಲಾಕ್ ವಿಡಿಯೋಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪರ-ವಿರೋಧದ ಕಾಮೆಂಟ್‌ಗಳು ಬಂದಿವೆ. ವಿಡಿಯೋ ನೋಡಿದ ನೆಟ್ಟಿಗರು, ಸ್ವಲ್ಪನಾದ್ರೂ ಸಂಸ್ಕೃತಿ ಉಳಿಸಿಕೊಳ್ಳಿ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು, ದೇಶದಲ್ಲಿ ಸಂಸ್ಕೃತಿ ಅನ್ನೋದು ದೆಹಲಿ ಮೆಟ್ರೋ ಏರುವಾಗಿ ಕೊನೆಯಾಗುತ್ತದೆ ಎಂದು ಟೀಕೆ ಮಾಡಿದ್ದಾರೆ.

ಈ ವಿಡಿಯೋದಲ್ಲಿ ಲವರ್‌ಗಳು ಕೈಕೈ ಹಿಡಿದುಕೊಂಡು ಮೆಟ್ರೋದ ನೆಲದ ಮೇಲೆ ಕುಳಿತಿದ್ದು, ಸುತ್ತಲಿನ ಜನರ ಪರಿವೇ ಇಲ್ಲದೇ, ಲಿಪ್‌ಲಾಕ್‌ ಮಾಡುತ್ತಾ, ರೊಮಾನ್ಸ್ ಮಾಡುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.