ದೇಶ

ಇನ್ನುಮುಂದೆ ತನ್ನ ತಂತ್ರಗಳು ನಡೆಯಲ್ಲ ಎಂದು ಬಿಜೆಪಿ ಅರಿತುಕೊಳ್ಳಬೇಕು: ಕೇಜ್ರಿವಾಲ್

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಗೆ ಅಭಿನಂದನೆ ಸಲ್ಲಿಸಿದ ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಬಿಜೆಪಿ ತನ್ನ ತಂತ್ರಗಳು ಇನ್ನು ಮುಂದೆ...

ಇನ್ನುಮುಂದೆ ತನ್ನ ತಂತ್ರಗಳು ನಡೆಯಲ್ಲ ಎಂದು ಬಿಜೆಪಿ ಅರಿತುಕೊಳ್ಳಬೇಕು: ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Published On :

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಗೆ ಅಭಿನಂದನೆ ಸಲ್ಲಿಸಿದ ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಬಿಜೆಪಿ ತನ್ನ ತಂತ್ರಗಳು ಇನ್ನು ಮುಂದೆ ಕೆಲಸ ಮಾಡುವುದಿಲ್ಲ ಎಂಬುದನ್ನು ಈಗಲೇ ಅರಿತುಕೊಳ್ಳಬೇಕು ಎಂದು ಶನಿವಾರ ಹೇಳಿದ್ದಾರೆ.

ಆದಾಗ್ಯೂ, ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಎಎಪಿಯ ಹೀನಾಯ ಸೋಲನ್ನು ಒಪ್ಪಿಕೊಂಡ ದೆಹಲಿ ಸಿಎಂ, ಕರ್ನಾಟಕದಲ್ಲಿಯೂ ಗೆಲ್ಲುವ ಸಮಯ ಬರುತ್ತದೆ ಎಂದು ಹೇಳಿದ್ದಾರೆ.

ಚುನಾವಣಾ ಆಯೋಗದ ವೆಬ್‌ಸೈಟ್ ಪ್ರಕಾರ, ಎಎಪಿ ಕೇವಲ ಶೇಕಡಾ 0.58 ರಷ್ಟು ಮತಗಳನ್ನು ಪಡೆದುಕೊಂಡಿದೆ. ಪಂಜಾಬ್‌ನ ಜಲಂಧರ್ ಲೋಕಸಭಾ ಉಪಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಸುಶೀಲ್ ರಿಂಕು ಅವರ ಗೆಲುವನ್ನು ಕೇಜ್ರಿವಾಲ್ ಶ್ಲಾಘಿಸಿದರು ಮತ್ತು ಇದು "ಐತಿಹಾಸಿಕ ಮತ್ತು ಅಭೂತಪೂರ್ವ" ಗೆಲುವು ಎಂದು ಬಣ್ಣಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.