ಪಶ್ಚಿಮ ಬಂಗಾಳ: ಬಾಂಗ್ಲಾದೇಶಿ ವಿದ್ಯಾರ್ಥಿನಿ ಮೇಲೆ ಪ್ರಾಧ್ಯಾಪಕನಿಂದ ಅತ್ಯಾಚಾರ
ಪಶ್ಚಿಮ ಬರ್ಧಮಾನ್ ಜಿಲ್ಲೆಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರ ವಿರುದ್ಧ ಬಾಂಗ್ಲಾದೇಶದ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಜೀವ ಬೆದರಿಕೆ ಆರೋಪ ಮಾಡಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ ಪಶ್ಚಿಮ ಬಂಗಾಳ ಮಹಿಳಾ ಆಯೋಗ...

ಕೋಲ್ಕತಾ: ಪಶ್ಚಿಮ ಬರ್ಧಮಾನ್ ಜಿಲ್ಲೆಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರ ವಿರುದ್ಧ ಬಾಂಗ್ಲಾದೇಶದ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಜೀವ ಬೆದರಿಕೆ ಆರೋಪ ಮಾಡಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ ಪಶ್ಚಿಮ ಬಂಗಾಳ ಮಹಿಳಾ ಆಯೋಗ ಸೋಮವಾರ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವುದಾಗಿ ತಿಳಿಸಿದೆ.
ಪೊಲೀಸ್ ತನಿಖೆಯ ನಂತರ ಆರೋಪ ನಿಜವೆಂದು ಕಂಡುಬಂದಲ್ಲಿ ಸೂಕ್ತ ಕ್ರಮಕ್ಕೆ ಶಿಫಾರಸು ಮಾಡಲಿದೆ.
ಶನಿವಾರ ಅಸನ್ಸೋಲ್ ಬಳಿಯ ಸರ್ಕಾರಿ ಸ್ವಾಮ್ಯದ ಕಾಜಿ ನಜ್ರುಲ್ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ವಾಸಿಸುವ ದೂರುದಾರ ಯುವತಿ ಸೇರಿದಂತೆ ಸಂಬಂಧಿಸಿದ ಎಲ್ಲರೊಂದಿಗೆ ಮಾತನಾಡಿರುವುದಾಗಿ ಮಹಿಳಾ ಆಯೋಗದ ಅಧ್ಯಕ್ಷೆ ಲೀನಾ ಗಂಗೋಪಾಧ್ಯಾಯ ಅವರು ಪಿಟಿಐಗೆ ತಿಳಿಸಿದ್ದಾರೆ.
ಆರೋಪಿಯು ಎಸ್‌ಎಂಎಸ್ ಮೂಲಕ ಯುವತಿಗೆ ಕಳುಹಿಸಿದ್ದ ಜೀವ ಬೆದರಿಕೆ ಸೇರಿದಂತೆ ಮಹಿಳೆಯ ದೂರಿನಲ್ಲಿ ಉಲ್ಲೇಖಿಸಿರುವ ಎಲ್ಲ ಅಂಶಗಳನ್ನು ಪರಿಶೀಲಿಸುವಂತೆ ಆಯೋಗದ ಸದಸ್ಯರು ಪೊಲೀಸರಿಗೆ ಶಿಫಾರಸು ಮಾಡಿದ್ದಾರೆ.
ಸ್ನಾತಕೋತ್ತರ ವಿದ್ಯಾರ್ಥಿನಿಯಿಂದ ಆಯೋಗಕ್ಕೆ ದೂರು ಬಂದಿರುವುದಾಗಿ ಗಂಗೋಪಾಧ್ಯಾಯ ಅವರು ಹೇಳಿದ್ದಾರೆ. ಅಲ್ಲದೆ ದೂರುದಾರ ವಿದ್ಯಾರ್ಥಿನಿಯೊಂದಿಗೆ ಒಂದಕ್ಕಿಂತ ಹೆಚ್ಚು ಬಾರಿ ಫೋನ್ ಮೂಲಕ ಸಂವಾದ ನಡೆಸಿದ್ದೇನೆ ಮತ್ತು ಅವರ ಅಭಿಪ್ರಾಯಗಳನ್ನು ಪಡೆದಿದ್ದೇನೆ. ಪೊಲೀಸರಿಗೆ ದೂರು ನೀಡಿದ ನಂತರ ಎಸ್ಎಂಎಸ್ ಮೂಲಕ ಬೆದರಿಕೆ ಹಾಕಿದ್ದಾರೆ ಎಂದು ಯುವತಿ ತಮಗೆ ತಿಳಿಸಿರುವುದಾಗಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


