ಜೂನ್ 4 ರಂದು ಕೇರಳಕ್ಕೆ ಮುಂಗಾರು ಆಗಮನ
ಈ ಬಾರಿ ಕೇರಳದ ಮೇಲೆ ನೈಋತ್ಯ ಮಾನ್ಸೂನ್ ಸ್ವಲ್ಪ ವಿಳಂಬವಾಗುವ ನಿರೀಕ್ಷೆ ಇದ್ದು, ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮಂಗಳವಾರ ಮುನ್ಸೂಚನೆ ನೀಡಿದೆ.

ನವದೆಹಲಿ: ಈ ಬಾರಿ ಕೇರಳದ ಮೇಲೆ ನೈಋತ್ಯ ಮಾನ್ಸೂನ್ ಸ್ವಲ್ಪ ವಿಳಂಬವಾಗುವ ನಿರೀಕ್ಷೆ ಇದ್ದು, ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮಂಗಳವಾರ ಮುನ್ಸೂಚನೆ ನೀಡಿದೆ.
ನೈಋತ್ಯ ಮಾನ್ಸೂನ್ ಸಾಮಾನ್ಯವಾಗಿ ಜೂನ್ 1 ರಂದು ಕೇರಳ ಪ್ರವೇಶಿಸುತ್ತದೆ ಮತ್ತು ಸುಮಾರು ಒಂದು ವಾರ ಏರುಪೇರು ಆಗುವ ಸಾಧ್ಯತೆಯೂ ಇರುತ್ತದೆ.
"ಈ ವರ್ಷ ಕೇರಳದ ಮೇಲೆ ನೈರುತ್ಯ ಮುಂಗಾರು ಪ್ರಾರಂಭವಾಗುವುದು ಸ್ವಲ್ಪ ವಿಳಂಬವಾಗುವ ಸಾಧ್ಯತೆಯಿದೆ. ಈ ಬಾರಿ 4 ದಿನ ವಿಳಂಬವಾಗಿ ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ" ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನು ಓದಿ: ಈ ವರ್ಷ ಸಾಮಾನ್ಯ ಮುಂಗಾರು ನಿರೀಕ್ಷೆ: ಕೇಂದ್ರ ಸರ್ಕಾರ
ಮಾನ್ಸೂನ್ ಕಳೆದ ವರ್ಷ ಮೇ 29 ರಂದು, 2021 ರಲ್ಲಿ ಜೂನ್ 3 ಮತ್ತು 2020 ರಲ್ಲಿ ಜೂನ್ 1 ರಂದು ದೇವರ ನಾಡು ದಕ್ಷಿಣ ರಾಜ್ಯ ಪ್ರವೇಶಿಸಿತ್ತು.
ವಿಕಸನಗೊಳ್ಳುತ್ತಿರುವ ಎಲ್ ನಿನೋ ಪರಿಸ್ಥಿತಿಗಳ ಹೊರತಾಗಿಯೂ ನೈಋತ್ಯ ಮುಂಗಾರು ಅವಧಿಯಲ್ಲಿ ದೇಶದಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಕಳೆದ ತಿಂಗಳು ಹೇಳಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


