ದೇಶ

ರೋಜ್‌ಗಾರ್ ಮೇಳ: 71 ಸಾವಿರ ಯುವಕರಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

ಕೇಂದ್ರ ಸರ್ಕಾರದ ‘ರೋಜ್ಗಾರ್‌ ಮೇಳ’ದ ಅಡಿಯಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಪಡೆದ 71 ಸಾವಿರ ಯುವಕರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ನೇಮಕಾತಿ ಪತ್ರಗಳನ್ನು ವಿತರಿಸಿದರು.

ರೋಜ್‌ಗಾರ್ ಮೇಳ: 71 ಸಾವಿರ ಯುವಕರಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ
ಪ್ರಧಾನಿ ಮೋದಿ
Published On :

ನವದೆಹಲಿ: ಕೇಂದ್ರ ಸರ್ಕಾರದ ‘ರೋಜ್ಗಾರ್‌ ಮೇಳ’ದ ಅಡಿಯಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಪಡೆದ 71 ಸಾವಿರ ಯುವಕರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ನೇಮಕಾತಿ ಪತ್ರಗಳನ್ನು ವಿತರಿಸಿದರು.

ವಿಡಿಯೋ ಕಾನ್ಫರೆನ್ಸ್ ಮೂಲಕ ಮೋದಿಯವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ನೇಮಕಾತಿ ಪತ್ರ ವಿತರಣೆಗೆ ಚಾಲನೆ ನೀಡಿದರು.

ದೇಶಾದ್ಯಂತ 45 ಸ್ಥಳಗಳಲ್ಲಿ ರೋಜ್‌ಗಾರ್ ಮೇಳವನ್ನು ಆಯೋಜಿಸಲಾಗಿತ್ತು. ಈ ಉಪಕ್ರಮವನ್ನು ಬೆಂಬಲಿಸುವ ಸಲುವಾಗಿ ಕೇಂದ್ರ ಸರಕಾರದ ಇಲಾಖೆಗಳು ಹಾಗೂ ರಾಜ್ಯ ಸರ್ಕಾರಗಳು/ಕೇಂದ್ರಾಡಳಿತಗಳಿಗೆ ನೇಮಕಾತಿಗಳು ನಡೆಯುತ್ತಿವೆ.

ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯ ಈಡೇರಿಕೆಗೆ ರೋಜ್‌ಗಾರ್ ಮೇಳ ಒಂದು ಹೆಜ್ಜೆಯಾಗಿದೆ ಎಂದು ಸರಕಾರಿ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.