ಸಲ್ಮಾನ್ ಖಾನ್ ಸಹೋದರಿ ಅರ್ಪಿತಾ ಖಾನ್ ಶರ್ಮಾ ಮನೆಯಲ್ಲಿ ಕಳ್ಳತನ: ಮನೆ ಕೆಲಸದವನ ಬಂಧನ
ಬಾಲಿವುಡ್ ನಟ ಸಲ್ಮಾನ್ ಖಾನ್ ಸಹೋದರಿ ಅರ್ಪಿತಾ ಮನೆಯಲ್ಲಿ ಕಳ್ಳತನವಾಗಿದೆ. ಇದಾದ ಬಳಿಕ ಪೊಲೀಸರಿಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಅರ್ಪಿತಾ ಖಾನ್ ಅವರ ಮನೆ ಕೆಲಸದವನನ್ನು ಬಂಧಿಸಿದ್ದಾರೆ.

ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಸಹೋದರಿ ಅರ್ಪಿತಾ ಮನೆಯಲ್ಲಿ ಕಳ್ಳತನವಾಗಿದೆ. ಇದಾದ ಬಳಿಕ ಪೊಲೀಸರಿಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಅರ್ಪಿತಾ ಖಾನ್ ಅವರ ಮನೆ ಕೆಲಸದವನನ್ನು ಬಂಧಿಸಿದ್ದಾರೆ.
ಅರ್ಪಿತಾ ಖಾನ್ ಅವರ ಖಾರ್ ನಿವಾಸದಿಂದ ವಜ್ರದ ಕಿವಿಯೋಲೆ ಕಳ್ಳತನವಾಗಿತ್ತು. ಇದೀಗ ಮುಂಬೈ ಪೊಲೀಸರು ಅದನ್ನು ವಶಪಡಿಸಿಕೊಂಡು ಕಳ್ಳನನ್ನು ಹಿಡಿದಿದ್ದಾರೆ.
ಮುಂಬೈ ಪೊಲೀಸರು ಚಿನ್ನಾಭರಣ ಕದ್ದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಖಾರ್ ಪೊಲೀಸರು ಕಳ್ಳನನ್ನು ಹಿಡಿದಿದ್ದಾರೆ. ಮುಂಬೈನ ವಿಲೇಪಾರ್ಲೆ ಪ್ರದೇಶದಲ್ಲಿ ವಾಸವಾಗಿರುವ ಆತ ಅರ್ಪಿತಾ ಖಾನ್ ಅವರ ಮನೆಯಲ್ಲಿ ಮನೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದನು. ಈ ಹಿಂದೆ ಅರ್ಪಿತಾ ಖಾನ್ ತನ್ನ ಮೇಕಪ್ ಟ್ರೇನಲ್ಲಿಟ್ಟಿದ್ದ ₹5 ಲಕ್ಷ ಮೌಲ್ಯದ ಕಿವಿಯೋಲೆಗಳು ಮನೆಯಿಂದ ನಾಪತ್ತೆಯಾಗಿವೆ ಎಂದು ಪೊಲೀಸರಿಗೆ ದೂರು ನೀಡಿದ್ದರು. ಈ ಘಟನೆ ನಡೆದಿದ್ದು ಮೇ 16 ರಂದು. ಅದೇ ರಾತ್ರಿ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಖಾರ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮೋಹನ್ ಮಾನೆ ತಂಡಕ್ಕೆ ಮಾಹಿತಿ ನೀಡಿದ್ದು, ಅವರು ಮನೆಗೆಲಸದವರನ್ನು ಬಂಧಿಸಿದ್ದಾರೆ. ಆರೋಪಿಯನ್ನು ಹೊರತುಪಡಿಸಿ 11 ಮಂದಿ ಇದೇ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಆಭರಣಗಳನ್ನು ಕದ್ದು ಯಾರಿಗೂ ತಿಳಿಸದೆ ಪರಾರಿಯಾಗಿದ್ದನು. ಕಳುವಾಗಿದ್ದ ಆಭರಣವನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಆತನ ವಿರುದ್ಧ ಸೆಕ್ಷನ್ 381ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


