ದೇಶ

ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್‌ಗೆ ಆಹ್ವಾನ

ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರನ್ನು ಆಹ್ವಾನಿಸಲಾಗಿದೆ ಎಂದು ಸರ್ಕಾರ ಗುರುವಾರ ತಿಳಿಸಿದೆ.

ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್‌ಗೆ ಆಹ್ವಾನ
ಎಂ.ಕೆ.ಸ್ಟಾಲಿನ್
Published On :

ಚೆನ್ನೈ: ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರನ್ನು ಆಹ್ವಾನಿಸಲಾಗಿದೆ ಎಂದು ಸರ್ಕಾರ ಗುರುವಾರ ತಿಳಿಸಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯ ಅವರು ಇಂದು ಸ್ಟಾಲಿನ್ ಅವರಿಗೆ ಕರೆ ಮಾಡಿ ಮೇ 20ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುವಂತೆ ಆಹ್ವಾನಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ 10 ರಂದು ನಡೆದ ಚುನಾವಣೆಯಲ್ಲಿ, ಕಾಂಗ್ರೆಸ್ 135 ಸ್ಥಾನಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದರೆ, ಆಡಳಿತಾರೂಢ ಬಿಜೆಪಿ ಮತ್ತು ಜೆಡಿಎಸ್ ಕ್ರಮವಾಗಿ 66 ಮತ್ತು 19 ಸ್ಥಾನಗಳನ್ನು ಗಳಿಸಿತು.

ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲಿ ನಡೆದ ಮುಖ್ಯಮಂತ್ರಿ ಆಯ್ಕೆಯ ಕಸರತ್ತಿಗೆ ಇಂದು ತೆರೆ ಬಿದ್ದಿದ್ದು, ಅಧಿಕಾರ ಹಂಚಿಕೆಯ ಸೂತ್ರದಡಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮತ್ತು ಡಿಕೆ ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.