ಜಮ್ಮು-ಕಾಶ್ಮೀರ: ಕಂದಕಕ್ಕೆ ಉರುಳಿ ಬಿದ್ದ ವಾಹನ; 7 ದುರ್ಮರಣ
ಜಮ್ಮು-ಕಾಶ್ಮೀರo ಕಿಶ್ತ್ವಾರದಲ್ಲಿ ವಾಹನವೊಂದು ಆಳವಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

ಕಿಶ್ತ್ವಾರ (ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರo ಕಿಶ್ತ್ವಾರದಲ್ಲಿ ವಾಹನವೊಂದು ಆಳವಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.
ದಂಗದೂರು ಪವರ್ ಪ್ರಾಜೆಕ್ಟ್‌ನ 10 ಕಾರ್ಮಿಕರನ್ನು ಕರೆದೊಯ್ಯುತ್ತಿದ್ದಾಗ ದಂಗದೂರು ಅಣೆಕಟ್ಟಿನ ಬಳಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಕ್ರೂಸರ್ ವಾಹನವು ಕಣಿವೆಯಲ್ಲಿ ಬಿದ್ದಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ವಾಹನ ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಸಾವು-ನೋವು ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಸ್ಥಳದಲ್ಲಿ ಆಗಾಗ್ಗೆ ಹೆಚ್ಚಾಗಿ ಅಪಘಾತ ಸಂಭವಿಸುತ್ತದೆ. ಚಾಲಕ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ’ ಎಂದು ಅಧಿಕರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


