ರಾಜಸ್ಥಾನ: ಇಬ್ಬರು ಇಡಿ ಅಧಿಕಾರಿಗಳನ್ನು ಬಂಧಿಸಿದ ಎಸಿಬಿ; ಧೊಟಾಸರಾ ಪುತ್ರರಿಗೆ ಸಮನ್ಸ್
ರಾಜಸ್ಥಾನದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ತನ್ನ ತನಿಖೆಯನ್ನು ವಿಸ್ತರಿಸುತ್ತಿದ್ದು, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್ ಅವರ ತನಿಖೆಯ ನಂತರ, ಇದೀಗ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ಧೊಟಾಸರಾ ಅವರ...

ಜೈಪುರ: ರಾಜಸ್ಥಾನದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ತನ್ನ ತನಿಖೆಯನ್ನು ವಿಸ್ತರಿಸುತ್ತಿದ್ದು, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್ ಅವರ ತನಿಖೆಯ ನಂತರ, ಇದೀಗ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ಧೊಟಾಸರಾ ಅವರ ಪುತ್ರರಾದ ಅಭಿಲಾಷ್ ಮತ್ತು ಅವಿನಾಶ್ ಧೊಟಾಸರಾ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.
ಇಡಿ ದಾಳಿ ವಿವಾದಕ್ಕೀಡಾಗಿರುವ ಬೆನ್ನಲ್ಲೇ ರಾಜಸ್ಥಾನ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಗುರುವಾರ ಅಲ್ವಾರ್ನಲ್ಲಿ ಇಡಿ ಅಧಿಕಾರಿ ನೌಲ್ ಕಿಶೋರ್ ಮೀನಾ ಮತ್ತು ಅವರ ಸಹಾಯಕರನ್ನು ಬಂಧಿಸಿದೆ.
ಮಣಿಪುರದ ಚಿಟ್ ಫಂಡ್ ಕಂಪನಿಯೊಂದರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಗೆ 17 ಲಕ್ಷ ರೂ. ನೀಡುವಂತೆ ಒತ್ತಾಯಿಸುತ್ತಿದ್ದ ವೇಳೆ ದಾಳಿ ನಡೆಸಿದ ಎಸಿಬಿ ಇಡಿ ಇನ್ಸ್ಪೆಕ್ಟರ್ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿಕೊಂಡಿದೆ.
ನವೆಂಬರ್ 7 ರಂದು ಅಭಿಲಾಷ್ ಮತ್ತು ನವೆಂಬರ್ 8 ರಂದು ಅವಿನಾಶ್ ಅವರಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿರುವ ಇಡಿ, ನವೆಂಬರ್ 9 ರಂದು ಇಬ್ಬರನ್ನೂ ಜಂಟಿ ವಿಚಾರಣೆ ನಡೆಸಲು ನಿರ್ಧರಿಸಲಾಗಿದೆ.
ಈ ಪ್ರಕರಣ ಗೋವಿಂದ್ ಸಿಂಗ್ ಧೊಟಾಸರಾ ಅವರು ಶಿಕ್ಷಣ ಸಚಿವರಾಗಿದ್ದಾಗ ನಡೆದ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


