ಪಶ್ಚಿಮ ಬಂಗಾಳ: ಟಿಎಂಸಿ ಮುಖಂಡನಿಗೆ ಗುಂಡಿಕ್ಕಿ ಹತ್ಯೆ, ದಾಳಿಕೋರನನ್ನು ಹೊಡೆದು ಕೊಂದ ಜನ
ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಜಾಯ್‌ನಗರದಲ್ಲಿ ಸೋಮವಾರ ಬೆಳಗ್ಗೆ ಸ್ಥಳೀಯ ತೃಣಮೂಲ ಕಾಂಗ್ರೆಸ್ ಮುಖಂಡನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಆಕ್ರೋಶಗೊಂಡ ಜನರ ಗುಂಪೊಂದು ದಾಳಿಕೋರನನ್ನು ಹಿಡಿದು...

ಕೋಲ್ಕತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಜಾಯ್‌ನಗರದಲ್ಲಿ ಸೋಮವಾರ ಬೆಳಗ್ಗೆ ಸ್ಥಳೀಯ ತೃಣಮೂಲ ಕಾಂಗ್ರೆಸ್ ಮುಖಂಡನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಆಕ್ರೋಶಗೊಂಡ ಜನರ ಗುಂಪೊಂದು ದಾಳಿಕೋರನನ್ನು ಹಿಡಿದು ಹೊಡೆದು ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜೋಯ್‌ನಗರದ ಬಮುಂಗಾಚಿ ಪ್ರದೇಶದ ಟಿಎಂಸಿ ಅಧ್ಯಕ್ಷ ಸೈಫುದ್ದೀನ್ ಲಸ್ಕರ್ ಅವರನ್ನು ಕೆಲವು ದುಷ್ಕರ್ಮಿಗಳು ಅವರ ಮನೆಯ ಬಳಿ ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸ್ಥಳೀಯರ ಪ್ರಕಾರ, ಲಸ್ಕರ್ ಅವರ ಪತ್ನಿ ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದು, ಅವರ ಬೆಂಬಲಿಗರು ದಾಳಿಕೋರರಲ್ಲಿ ಒಬ್ಬನನ್ನು ಹಿಡಿದು ಹೊಡೆದು ಕೊಂದಿದ್ದಾರೆ.
ಲಸ್ಕರ್ ಹತ್ಯೆಯ ಹಿಂದೆ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್‌ವಾದಿ ಬೆಂಬಲಿಗರ ಕೈವಾಡವಿದೆ ಎಂದು ಸ್ಥಳೀಯ ಟಿಎಂಸಿ ಮುಖಂಡರು ಆರೋಪಿಸಿದ್ದಾರೆ. ಆದರೆ, ಸಿಪಿಎಂ ನಾಯಕ ಸುಜನ್ ಚಕ್ರವರ್ತಿ ಅವರು ಈ ಆರೋಪವನ್ನು ತಳ್ಳಿ ಹಾಕಿದ್ದು, ಟಿಎಂಸಿಯ ಆಂತರಿಕ ಕಲಹವೇ ಲಸ್ಕರ್ ಅವರ ಹತ್ಯೆಗೆ ಕಾರಣ. ಸಿಪಿಎಂ ಅನ್ನು ದೂಷಿಸಿ ಪ್ರಯೋಜನವಿಲ್ಲ. ಪೊಲೀಸರು ಸೂಕ್ತ ತನಿಖೆ ನಡೆಸಿ ಪಿತೂರಿಯನ್ನು ಬಯಲಿಗೆಳೆಯಬೇಕು ಎಂದು ಹೇಳಿದ್ದಾರೆ.
ಟಿಎಂಸಿ ನಾಯಕನ ಹತ್ಯೆಗೆ ಸಂಬಂಧಿಸಿದಂತೆ ಒಬ್ಬನನ್ನು ಬಂಧಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


