ಉರಿ ಸೆಕ್ಟರ್ ನಲ್ಲಿ ಉಗ್ರರ ಒಳನುಸುಳುವಿಕೆ ಪ್ರಯತ್ನ: ಟೆರರ್ ಲಾಂಚ್ ಕಮಾಂಡರ್ ಹತ್ಯೆ!
ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಉಗ್ರರ ಒಳನುಸುಳುವಿಕೆ ಪ್ರಯತ್ನ ವಿಫಲಗೊಳಿಸಿರುವ ಭದ್ರತಾ ಪಡೆಗಳು ಪ್ರಮುಖ ಟೆರರ್ ಲಾಂಚ್ ಕಮಾಂಡರ್ ಬಶೀರ್ ಅಹ್ಮದ್ ಮಲ್ಲಿಕ್ ನನ್ನು ಗುಂಡಿಟ್ಟು ಹತ್ಯೆ ಮಾಡಿದೆ ಎಂದು ಸೇನೆ ಗುರುವಾರ ತಿಳಿಸಿದೆ.

ಬಾರಾಮುಲ್ಲಾ: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಉಗ್ರರ ಒಳನುಸುಳುವಿಕೆ ಪ್ರಯತ್ನ ವಿಫಲಗೊಳಿಸಿರುವ ಭದ್ರತಾ ಪಡೆಗಳು ಪ್ರಮುಖ ಟೆರರ್ ಲಾಂಚ್ ಕಮಾಂಡರ್ ಬಶೀರ್ ಅಹ್ಮದ್ ಮಲ್ಲಿಕ್ ನನ್ನು ಗುಂಡಿಟ್ಟು ಹತ್ಯೆ ಮಾಡಿದೆ ಎಂದು ಸೇನೆ ಗುರುವಾರ ತಿಳಿಸಿದೆ.
ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮಲ್ಲಿಕ್ ಮತ್ತು ಮತ್ತೋರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಮಲ್ಲಿಕ್ ಬಶೀರ್ ಪಾಕ್ ಆಕ್ರಮಿತ ಪ್ರದೇಶ ಉತ್ತರದ ಲೀಪಾದಿಂದ ದಕ್ಷಿಣದ ರಜೌರಿಯವರೆಗೂ ಗಡಿಯಾಚೆಗಿನ ಭಯೋತ್ಪಾದನೆಯ ಪ್ರಮುಖ ಕಮಾಂಡರ್ ಆಗಿದ್ದ ಎಂದು ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಳೆದ 30 ವರ್ಷಗಳಿಂದ ಸಕ್ರಿಯರಾಗಿದ್ದ ಮಲಿಕ್, ಹಲವು ಉಗ್ರರನ್ನು ಒಳನುಸುಳುವಲ್ಲಿ ಯಶಸ್ವಿಯಾಗಿದ್ದ. ಇದರಿಂದಾಗಿ ಅನೇಕ ಭಾರತೀಯ ನಾಗರಿಕರು, ಭದ್ರತಾ ಪಡೆಗಳ ಸಾವಿಗೂ ಕಾರಣನಾಗಿದ್ದ. ಆತನ ಹತ್ಯೆ ನಿಯಂತ್ರಣ ರೇಖೆಯಾದ್ಯಂತ ಉಗ್ರರಿಗೆ ಮೂಲಸೌಕರ್ಯ ಒದಗಿಸುತ್ತಿದ್ದವರಿಗೆ ದೊಡ್ಡ ಹೊಡೆತವಾಗಿದೆ ಎಂದು ಅಧಿಕಾರಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


