ದೇಶ

ದೆಹಲಿ ಅಬಕಾರಿ ಹಗರಣ: ಸಿಸೋಡಿಯಾ ನ್ಯಾಯಾಂಗ ಬಂಧನ ಡಿಸೆಂಬರ್ 11 ರವರೆಗೆ ವಿಸ್ತರಣೆ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮಾಜಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ರೂಸ್‌ ಅವೆನ್ಯೂ ಕೋರ್ಟ್ ಮಂಗಳವಾರ ಡಿಸೆಂಬರ್‌ 11ರವರೆಗೆ...

ದೆಹಲಿ ಅಬಕಾರಿ ಹಗರಣ: ಸಿಸೋಡಿಯಾ ನ್ಯಾಯಾಂಗ ಬಂಧನ ಡಿಸೆಂಬರ್ 11 ರವರೆಗೆ ವಿಸ್ತರಣೆ
ಮನೀಶ್ ಸಿಸೋಡಿಯಾ
Published On :

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮಾಜಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ರೂಸ್‌ ಅವೆನ್ಯೂ ಕೋರ್ಟ್ ಮಂಗಳವಾರ ಡಿಸೆಂಬರ್‌ 11ರವರೆಗೆ ವಿಸ್ತರಿಸಿದೆ.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ, ಜಾರಿ ನಿರ್ದೇಶನಾಲಯವು ಇನ್ನೂ ಹಲವಾರು ದಾಖಲೆಗಳನ್ನು ಸಲ್ಲಿಸಬೇಕಾಗಿದೆ ಎಂಬುದನ್ನು ಗಮನಿಸಿತು ಮತ್ತು ಆರೋಪಿಯ ನ್ಯಾಯಾಂಗ ಬಂಧನವನ್ನು ಡಿಸೆಂಬರ್ 11ರ ವರೆಗೆ ವಿಸ್ತರಿಸಿ ಆದೇಶಿಸಿದೆ.

ಫೆಬ್ರವರಿ 2023 ರಲ್ಲಿ, ದೆಹಲಿಯ ಹೊಸ ಅಬಕಾರಿ ನೀತಿ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದೆ. ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ ನಂತರ ಈ ನೀತಿಯನ್ನು ಹಿಂಪಡೆಯಲಾಗಿದೆ. 

ಸದ್ಯ ಸಿಸೋಡಿಯಾ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಸುಪ್ರೀಂ ಕೋರ್ಟ್ ಕೂಡ ಎಎಪಿ ನಾಯಕನಿಗೆ ಜಾಮೀನು ನಿರಾಕರಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.