ದೇಶ

ಇಬ್ಬರು ಉಗ್ರರು ಅಡಗಿರುವ ಶಂಕೆ: ಜಮ್ಮುವಿನಲ್ಲಿ ಎನ್ಕೌಂಟರ್ ಆರಂಭ

ಜಮ್ಮು ಮತ್ತು ಕಾಶ್ಮೀರದ ರೌಜರಿಯಲ್ಲಿ ಇಬ್ಬರು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಎನ್ಕೌಂಟರ್ ಆರಂಭಿಸಿದ್ದಾರೆ.

ಇಬ್ಬರು ಉಗ್ರರು ಅಡಗಿರುವ ಶಂಕೆ: ಜಮ್ಮುವಿನಲ್ಲಿ ಎನ್ಕೌಂಟರ್ ಆರಂಭ
ಸಂಗ್ರಹ ಚಿತ್ರ
Published On :

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರೌಜರಿಯಲ್ಲಿ ಇಬ್ಬರು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಎನ್ಕೌಂಟರ್ ಆರಂಭಿಸಿದ್ದಾರೆ.

ರಜೌರಿಯ ಕಲಕೋಟೆ ತಹಸಿಲ್‌ನ ಬಾಜಿ ಮಾಲ್ ಪ್ರದೇಶದಲ್ಲಿ ಭದ್ರತಾಪಡೆಗಳು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಸ್ಥಳದಲ್ಲಿ ಇಬ್ಬರು ಉಗ್ರರು ಅಡಗಿ ಕುಳಿತಿದ್ದು, ಯೋಧರ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದಾರೆ. ಉಗ್ರರು ಗುಂಡಿನ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಉಗ್ರರನ್ನು ಭದ್ರತಾ ಪಡೆಗಳು ಸುತ್ತುವರೆದಿದ್ದು, ಎರಡೂ ಕಡೆಯಿಂದ ಗುಂಡಿನ ಚಕಮಕಿ ಮುಂದುವರಿದಿದೆ. ಸೇನಾಪಡೆಗಳು ಉಗ್ರರಿಗೆ ತಕ್ಕ ಪ್ರತ್ಯುತ್ತರ ನೀಡುತ್ತಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.