ದೇಶ

ಹೈದರಾಬಾದ್‌: ನಿರುದ್ಯೋಗಿ ಯುವಕರೊಂದಿಗೆ ರಾಹುಲ್ ಸಂವಾದ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹೈದರಾಬಾದ್‌ನ ಜನಪ್ರಿಯ ರೆಸ್ಟೋರೆಂಟ್‌ಗೆ ಭೇಟಿ ನೀಡಿ, ನಿರುದ್ಯೋಗಿ ಯುವಕರೊಂದಿಗೆ ಸಂವಾದ ನಡೆಸಿದರು.

ಹೈದರಾಬಾದ್‌: ನಿರುದ್ಯೋಗಿ ಯುವಕರೊಂದಿಗೆ ರಾಹುಲ್ ಸಂವಾದ
ರಾಹುಲ್ ಗಾಂಧಿ
Published On :

ಹೈದರಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹೈದರಾಬಾದ್‌ನ ಜನಪ್ರಿಯ ರೆಸ್ಟೋರೆಂಟ್‌ಗೆ ಭೇಟಿ ನೀಡಿ, ನಿರುದ್ಯೋಗಿ ಯುವಕರೊಂದಿಗೆ ಸಂವಾದ ನಡೆಸಿದರು.

ನವೆಂಬರ್ 30 ರಂದು ನಡೆಯಲಿರುವ ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ತೆಲಂಗಾಣದಲ್ಲಿರುವ ರಾಹುಲ್ ಗಾಂಧಿ, ನಗರದ ಆರ್‌ಟಿಸಿ ಎಕ್ಸ್ ರೋಡ್‌ನಲ್ಲಿರುವ ಬಾವರ್ಚಿ ರೆಸ್ಟೋರೆಂಟ್‌ಗೆ ಭೇಟಿ ನೀಡಿದರು.ಗ್ರಾಹಕರು ರಾಹುಲ್ ಅವರನ್ನು ನೋಡಿ ಆಶ್ಚರ್ಯಚಕಿತರಾದರು. ಅಲ್ಲದೇ ಅವರೊಂದಿಗೆ ಕೈಕುಲುಕಲು, ಸೆಲ್ಫಿ ತೆಗೆದುಕೊಳ್ಳಲು ಪರಸ್ಪರ ಪೈಪೋಟಿ ನಡೆಸಿದರು.

ಸಿಟಿ ಸೆಂಟ್ರಲ್ ಲೈಬ್ರರಿಗೆ ಭೇಟಿ ನೀಡಿದ ರಾಹುಲ್ ಗಾಂಧಿ, ಸರ್ಕಾರಿ ನೇಮಕಾತಿ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ನಿರುದ್ಯೋಗಿ ಯುವಕರೊಂದಿಗೆ ಮಾತುಕತೆ ನಡೆಸಿದರು. TSPSC ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ತಾವು ಎದುರಿಸುತ್ತಿರುವ ಸಮಸ್ಯೆಗಳನ್ನು ಅಭ್ಯರ್ಥಿಗಳು ವಿವರಿಸಿದರು. 

 ಇತ್ತೀಚೆಗೆ ಸರ್ಕಾರಿ ನೇಮಕಾತಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಕಾಂಗ್ರೆಸ್ ನಾಯಕ ವಿಚಾರಿಸಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎರಡು ಲಕ್ಷ ಯುವಕರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಗಾಂಧಿ ಯುವಕರಿಗೆ ಭರವಸೆ ನೀಡಿದರು. ಪರೀಕ್ಷೆಯ ದಿನಾಂಕಗಳು, ಫಲಿತಾಂಶಗಳು ಮತ್ತು ಉದ್ಯೋಗ ಅಧಿಸೂಚನೆಗಳೊಂದಿಗೆ ಉದ್ಯೋಗ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.