ದೇಶ

ಗುಜರಾತ್ ನಲ್ಲಿ ಅಕಾಲಿಕ ಮಳೆ: ಸಿಡಿಲು ಬಡಿದು 24 ಮಂದಿ ದಾರುಣ ಸಾವು

ಗುಜರಾತಿನಲ್ಲಿ ಸುರಿದ ಅಕಾಲಿಕ ಮಳೆಯ ನಂತರ ಸಿಡಿಲು ಬಡಿದು ಹಲವಾರು ಪ್ರದೇಶಗಳಲ್ಲಿ ಬೆಳೆ ಹಾನಿಯಾಗಿದ್ದು, ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಜರಾತ್ ನಲ್ಲಿ ಅಕಾಲಿಕ ಮಳೆ: ಸಿಡಿಲು ಬಡಿದು 24 ಮಂದಿ ದಾರುಣ ಸಾವು
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಗುಜರಾತಿನಲ್ಲಿ ಸುರಿದ ಅಕಾಲಿಕ ಮಳೆಯ ನಂತರ ಸಿಡಿಲು ಬಡಿದು ಹಲವಾರು ಪ್ರದೇಶಗಳಲ್ಲಿ ಬೆಳೆ ಹಾನಿಯಾಗಿದ್ದು, ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸ್ಥಳೀಯ ಆಡಳಿತವು ಪರಿಹಾರ ಕಾರ್ಯದಲ್ಲಿ ತೊಡಗಿದೆ ಎಂದು ಹೇಳಿದರು.

ಗುಜರಾತ್‌ನ ವಿವಿಧ ನಗರಗಳಲ್ಲಿ ಪ್ರತಿಕೂಲ ಹವಾಮಾನ ಮತ್ತು ಸಿಡಿಲಿನಿಂದ ಅನೇಕ ಜನರು ಸಾವನ್ನಪ್ಪಿದ ಸುದ್ದಿಯಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ  ನಾನು  ಸಂತಾಪ ವ್ಯಕ್ತಪಡಿಸುತ್ತೇನೆ. ಸ್ಥಳೀಯ ಆಡಳಿತ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ' ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಸೋಮವಾರ ಮಳೆ ಕಡಿಮೆಯಾಗುವ ನಿರೀಕ್ಷೆಯಿದೆ, ಆದರೆ ದಕ್ಷಿಣ ಗುಜರಾತ್ ಮತ್ತು ಸೌರಾಷ್ಟ್ರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಕೇಂದ್ರೀಕೃತವಾಗಿದೆ. ಗುಜರಾತ್‌ನ 252 ತಾಲೂಕುಗಳ ಪೈಕಿ 234 ತಾಲೂಕುಗಳಲ್ಲಿ ರವಿವಾರ ಮಳೆ ದಾಖಲಾಗಿದೆ ಎಂದು ವರದಿಯಾಗಿದೆ ಸೂರತ್, ಸುರೇಂದ್ರನಗರ, ಖೇಡಾ, ತಾಪಿ, ಭರೂಚ್ ಮತ್ತು ಅಮ್ರೇಲಿಯಂತಹ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಕೇವಲ 16 ಗಂಟೆಗಳಲ್ಲಿ 50 ರಿಂದ 117 ಮಿ.ಮೀ. ಮಳೆ ಸುರಿದಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.