ಉತ್ತರಕಾಶಿ ಸುರಂಗ ಕುಸಿತ: ಪೈಪ್ ಅಳವಡಿಕೆ ಕಾರ್ಯ ಪೂರ್ಣ, ಶೀಘ್ರ ಕಾರ್ಮಿಕರ ರಕ್ಷಣೆ - ಸಿಎಂ ಧಾಮಿ
ಉತ್ತರಾಖಂಡದ ಉತ್ತರಕಾಶಿಯಲ್ಲಿರುವ ಸಿಲ್ಕ್ಯಾರಾ ಸುರಂಗ ಕುಸಿತದಿಂದ ಒಳಗಡೆ ಸಿಲುಕಿರುವ 41 ಕಾರ್ಮಿಕರ ರಕ್ಷಣೆಗಾಗಿ ಪೈಪ್ ಅಳವಡಿಕೆ ಕಾರ್ಯ ಪೂರ್ಣಗೊಂಡಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು...

ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿಯಲ್ಲಿರುವ ಸಿಲ್ಕ್ಯಾರಾ ಸುರಂಗ ಕುಸಿತದಿಂದ ಒಳಗಡೆ ಸಿಲುಕಿರುವ 41 ಕಾರ್ಮಿಕರ ರಕ್ಷಣೆಗಾಗಿ ಪೈಪ್ ಅಳವಡಿಕೆ ಕಾರ್ಯ ಪೂರ್ಣಗೊಂಡಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಮಂಗಳವಾರ ಹೇಳಿದ್ದಾರೆ.
"... ಸುರಂಗದೊಳಗೆ ಪೈಪ್ ಅಳವಡಿಸುವ ಕೆಲಸ ಪೂರ್ಣಗೊಂಡಿದೆ. ಶೀಘ್ರದಲ್ಲೇ ಎಲ್ಲಾ ಕಾರ್ಮಿಕರನ್ನು ರಕ್ಷಿಸಲಾಗುವುದು" ಎಂದು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಟ್ವೀಟ್ ಮಾಡಿದ್ದಾರೆ.
ಉತ್ತರಾಖಂಡದ ಸಿಲ್ಕ್ಯಾರಾದಲ್ಲಿ ನಿರ್ಮಾಣ ಹಂತದ ಸುರಂಗ ಕುಸಿದ ಸ್ಥಳದಲ್ಲಿ ಕಳೆದ 17 ದಿನಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಇಂದು ಸುರಂಗದಲ್ಲಿ 60 ಮೀಟರ್‌ಗಳಷ್ಟು ಅವಶೇಷಗಳನ್ನು ಭೇದಿಸಿದ ರಕ್ಷಣಾ ಕಾರ್ಯಕರ್ತರು, 41 ಕಾರ್ಮಿಕರ ಸಂಕಷ್ಟವನ್ನು ಕೊನೆಗೊಳಿಸಿದ್ದಾರೆ. ಸ್ಥಳಕ್ಕೆ ಸಿಎಂ ಧಾಮಿ ಸಹ ಆಗಮಿಸಿದ್ದಾರೆ.
ಸ್ಥಳದಲ್ಲಿದ್ದ ಉತ್ತರಾಖಂಡದ ಹಿರಿಯ ಅಧಿಕಾರಿಯೊಬ್ಬರು ಕೊರೆಯು ಕಾರ್ಯ ಪೂರ್ಣಗೊಂಡಿದೆ ಎಂದು ಹೇಳಿದ್ದಾರೆ.
ಸಿಕ್ಕಿಬಿದ್ದ ಕಾರ್ಮಿಕರನ್ನು ರಕ್ಷಿಸಿದ ನಂತರ ಅವರನ್ನು ತಕ್ಷಣ ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಸಿಲ್ಕ್ಯಾರಾದಿಂದ ಸುಮಾರು 30 ಕಿಮೀ ದೂರದಲ್ಲಿರುವ ಚಿನ್ಯಾಲಿಸೌರ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಾರ್ಮಿಕರಿಗಾಗಿ 41 ಆಮ್ಲಜನಕ ಬೆಂಬಲಿತ ಹಾಸಿಗೆಗಳನ್ನು ಒಳಗೊಂಡ ಪ್ರತ್ಯೇಕ ವಾರ್ಡ್ ಅನ್ನು ಸಿದ್ಧಪಡಿಸಲಾಗಿದೆ.
ಕಳೆದ ಹದಿನೈದು ದಿನಗಳಿಂದ ಭಾರೀ ವಾಹನಗಳ ನಿಯಮಿತ ಸಂಚಾರದಿಂದಾಗಿ ಸುರಂಗಕ್ಕೆ ತೆರಳು ರಸ್ತೆ ಸಂಪೂರ್ಣ ಹಾಳಾಗಿದ್ದು, ಅದನ್ನು ದುರಸ್ತಿ ಮಾಡಲಾಗುತ್ತಿದೆ. ಈ ಮೂಲಕ ಆಂಬ್ಯುಲೆನ್ಸ್‌ಗಳ ಸುಗಮ ಸಂಚಾರಕ್ಕಾಗಿ ಅವಕಾಶ ಮಾಡಿಕೊಡಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


