ದೇಶ

ರಾಹುಲ್ ಕುರಿತ ಬಿಜೆಪಿ ಪೋಸ್ಟರ್ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ ಕಾಂಗ್ರೆಸ್ ನಾಯಕ!

ಪಕ್ಷದ ನಾಯಕ ರಾಹುಲ್ ಗಾಂಧಿ 'ನವಯುಗದ ರಾವಣ' ಎಂದು ಬಿಂಬಿಸುವ ಫೋಸ್ಟರ್ ಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪಕ್ಷದ ಐಟಿ ಸೆಲ್ ಉಸ್ತುವಾರಿ ಅಮಿತ್ ಮಾಳವಿಯಾ ವಿರುದ್ಧ ಕಾಂಗ್ರೆಸ್ ನಾಯಕರೊಬ್ಬರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ರಾಹುಲ್ ಕುರಿತ ಬಿಜೆಪಿ ಪೋಸ್ಟರ್ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ ಕಾಂಗ್ರೆಸ್ ನಾಯಕ!
ರಾಹುಲ್ ಗಾಂಧಿ ಫೋಸ್ಟರ್
Published On :

ಜೈಪುರ: ಪಕ್ಷದ ನಾಯಕ ರಾಹುಲ್ ಗಾಂಧಿ 'ನವಯುಗದ ರಾವಣ' ಎಂದು ಬಿಂಬಿಸುವ ಫೋಸ್ಟರ್ ಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪಕ್ಷದ ಐಟಿ ಸೆಲ್ ಉಸ್ತುವಾರಿ ಅಮಿತ್ ಮಾಳವಿಯಾ ವಿರುದ್ಧ ಕಾಂಗ್ರೆಸ್ ನಾಯಕರೊಬ್ಬರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಬಿಜೆಪಿ ನಾಯಕರ ವಿರುದ್ಧ ಐಪಿಸಿ ಸೆಕ್ಷನ್ 499 (ಇನ್ನೊಬ್ಬ ವ್ಯಕ್ತಿಯ ವಿರುದ್ಧ ಸುಳ್ಳು ಆರೋಪ), 500 (ಮಾನನಷ್ಟ), 504 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ರಾಜಸ್ಥಾನ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಜಸ್ವಂತ್ ಗುರ್ಜರ್ ಅವರು ತಮ್ಮ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಗುರ್ಜರ್  ಜೈಪುರ ಮೆಟ್ರೋಪಾಲಿಟನ್ ಕೋರ್ಟ್-11 ರಲ್ಲಿ ಅರ್ಜಿ ಸಲ್ಲಿಸಿದ್ದು, ಅಕ್ಟೋಬರ್ 9 ರಂದು ವಾದ ಆಲಿಸಲು ನ್ಯಾಯಾಲಯ ನಿರ್ಧರಿಸಿದೆ. ಬಿಜೆಪಿಯ ಅಧಿಕೃತ  ಎಕ್ಸ್‌ ಖಾತೆಯಲ್ಲಿ ಹಾಕಲಾದ ಪೋಸ್ಟರ್‌ನಲ್ಲಿ ರಾವಣನಂತೆ ಬಿಂಬಿಸುವ ಗಾಂಧಿ ಫೋಟೋ ವಿವಾದವನ್ನು ಹುಟ್ಟುಹಾಕಿದ್ದು, ಕಾಂಗ್ರೆಸ್‌ನಿಂದ ತೀವ್ರ ಟೀಕೆಗೆ ಕಾರಣವಾಗಿದೆ. ಅರ್ಜಿಯನ್ನು ನ್ಯಾಯಾಲಯ ಅಂಗೀಕರಿಸಿದ್ದು,  ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 9 ರಂದು ನಿಗದಿಪಡಿಸಲಾಗಿದೆ ಎಂದು ಗುರ್ಜರ್ ಹೇಳಿದ್ದಾರೆ. 

ಅಕ್ಟೋಬರ್ 5 ರಂದು ಉದ್ದೇಶಪೂರ್ವಕವಾಗಿ ಫೋಸ್ಟರ್ ಫೋಸ್ಟ್ ಮಾಡಲಾಗಿದೆ. ಕಾಂಗ್ರೆಸ್ ಮತ್ತು ಅದಕ್ಕೆ ಸಂಬಂಧಿಸಿದ ಜನರ ಅಭಿಮಾನವನ್ನು ಅವಮಾನಿಸುವುದು ಮತ್ತು ಹಾನಿ ಮಾಡುವುದು ಮತ್ತು ರಾಜಕೀಯ ಲಾಭ ಗಳಿಸುವುದು ಇದರ ಉದ್ದೇಶವಾಗಿದೆ ಎಂದು ಅವರು ಅರ್ಜಿಯಲ್ಲಿ ಆರೋಪಿಸಿದ್ದಾರೆ. ಆರೋಪಿಗಳಿಬ್ಬರ ಹೇಳಿಕೆಗಳನ್ನು ದಾಖಲಿಸಿಕೊಂಡು ತನಿಖೆ ನಡೆಸುವಂತೆ ಅರ್ಜಿದಾರರು ನ್ಯಾಯಾಲಯದ ಮುಂದೆ ಮನವಿ ಮಾಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.