ತಮಿಳುನಾಡು: ಪಟಾಕಿ ಗೋದಾಮಿನಲ್ಲಿ ಸ್ಫೋಟ, 11 ಜನರ ಸಾವು, 12 ಮಂದಿಗೆ ಗಾಯ; ಮಾಲೀಕ ಸೇರಿ ಇಬ್ಬರ ಬಂಧನ
ಕರ್ನಾಟಕದ ಗಡಿ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿ 14 ಮಂದಿ ಕಾರ್ಮಿಕರು ಮೃತಪಟ್ಟ ಬೆನ್ನಲ್ಲೇ ತಮಿಳುನಾಡಿನಲ್ಲಿಯೂ ಮಂಗಳವಾರ ಅಂತಹುದೇ ಘಟನೆ ನಡೆದಿದ್ದು, 11 ಜನರು ದುರ್ಮರಣ ಹೊಂದಿದ್ದಾರೆ.

ಅರಿಯಲೂರು: ಕರ್ನಾಟಕದ ಗಡಿ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿ 14 ಮಂದಿ ಕಾರ್ಮಿಕರು ಮೃತಪಟ್ಟ ಬೆನ್ನಲ್ಲೇ ತಮಿಳುನಾಡಿನಲ್ಲಿಯೂ ಮಂಗಳವಾರ ಅಂತಹುದೇ ಘಟನೆ ನಡೆದಿದ್ದು, 11 ಜನರು ದುರ್ಮರಣ ಹೊಂದಿದ್ದಾರೆ.
ಹೌದು. ಅರಿಯಲೂರು ಜಿಲ್ಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ 11 ಜನರು ಸಾವನ್ನಪ್ಪಿದ್ದು, 12 ಜನರು ಗಾಯಗೊಂಡಿದ್ದಾರೆ.
ಆರಂಭದಲ್ಲಿ ಘಟನೆಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿತ್ತು. ಆದರೆ, ಈಗ ಅದು ಹೆಚ್ಚಾಗಿದ್ದು, ಸಾವು ನೋವಿನ ಬಗ್ಗೆ ಜಿಲ್ಲಾಧಿಕಾರಿ ಖಚಿತ ಮಾಡಿದ್ದಾರೆ. ವೀರಗಳೂರು ಪಟ್ಟಣದಲ್ಲಿ ನಡೆದ ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ಅರಿಯಲೂರು ಜಿಲ್ಲಾಧಿಕಾರಿ ಅನ್ನೆ ಮೇರಿ ಸ್ವರ್ಣ ತಿಳಿಸಿದ್ದಾರೆ.
ಗಾಯಗೊಂಡ 12 ಜನರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಪಟಾಕಿ ಗೋದಾಮಿನ ಮಾಲೀಕ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಸ್ವರ್ಣಾ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


