ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿಗಣತಿ: ರಾಹುಲ್ ಗಾಂಧಿ ಭರವಸೆ
ತೆಲಂಗಾಣದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಭರವಸೆ ನೀಡಿದ್ದಾರೆ.

ಹೈದರಾಬಾದ್: ತೆಲಂಗಾಣದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಭರವಸೆ ನೀಡಿದ್ದಾರೆ.
ನವೆಂಬರ್ 30 ರಂದು ವಿಧಾನಸಭಾ ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ಕಾಂಗ್ರೆಸ್ ನ ವಿಜಯಭೇರಿ ಯಾತ್ರೆ ಭೂಪಾಲಪಲ್ಲಿಯಿಂದ ಪೆದ್ದಪಲ್ಲಿಗೆ ತೆರಳುವ ಮಾರ್ಗದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಜಾತಿ ಗಣತಿ ಬಗ್ಗೆ ಮಾತನಾಡುತ್ತಿಲ್ಲ ಎಂದರು.
ಜಾತಿ ಗಣತಿ ದಲಿತರು, ಆದಿವಾಸಿಗಳು ಮತ್ತು ಒಬಿಸಿಗಳ ಸ್ಥಿತಿಗತಿಯ ಮೇಲೆ ಬೆಳಕು ಚೆಲ್ಲುವ "ಎಕ್ಸ್-ರೇ" ಇದ್ದಂತೆ. ಇದು ನಮ್ಮ ತೆರಿಗೆ ಹಣ ಹೇಗೆ ಹಂಚಿಕೆಯಾಗುತ್ತಿದೆ ಎಂಬುದನ್ನು ನಿರ್ಧರಿಸುತ್ತದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ಹೇಳಿದ್ದಾರೆ.
ಜಾತಿ ಗಣತಿಯನ್ನು ಯಾವಾಗ ನಡೆಸುತ್ತೀರಿ ಎಂದು ನೀವು ಮೋದಿ ಮತ್ತು ಕೆಸಿಆರ್ ಅವರನ್ನು ಪ್ರಶ್ನಿಸಬೇಕು ಎಂದ ರಾಹುಲ್ ಗಾಂಧಿ, ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಮ್ಮ ಸರ್ಕಾರ ಮಾಡುವ ಮೊದಲ ಕೆಲಸವೆಂದರೆ ಜಾತಿ ಗಣತಿ ಎಂದರು.
ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಾದ ಛತ್ತೀಸ್ಗಢ, ರಾಜಸ್ಥಾನ ಮತ್ತು ಕರ್ನಾಟಕಕ್ಕೆ ಜಾತಿ ಗಣತಿ ನಡೆಸುವಂತೆ ಈಗಾಗಲೇ ಸೂಚಿಸಲಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


